ಇತ್ತೀಚಿನ ಸುದ್ದಿ
ಸಿಇಟಿ ಪರೀಕ್ಷೆ: ಕೇರಳ ವಿದ್ಯಾರ್ಥಿಗಳಿಗೆ ಗಡಿಯಿಂದ ವಿಶೇಷ ಬಸ್ ಸೌಕರ್ಯ
July 29, 2020, 2:27 PM

ಮಂಗಳೂರು(reporterkarnataka news):
ಕರ್ನಾಟಕ ಪರೀಕ್ಷೆ ಪ್ರಾಧಿಕಾರದಿಂದ ಜುಲೈ 30 ಮತ್ತು 31ರಂದು ನಡೆಯಲಿರುವ ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಜಿಲ್ಲೆಯ 17 ಕೇಂದ್ರಗಳಲ್ಲಿ ನಡೆಯಲಿದ್ದು, ಕೇರಳದಿಂದ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಹಂಚಿಕೊಂಡಿರುವ ಎಲ್ಲ ಗಡಿಗಳನ್ನು ಮುಚ್ಚಿರುವ ಪರಿಣಾಮ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ತಲಪಾಡಿ ಗಡಿ ಮೂಲಕ ಮಂಗಳೂರಿನ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು 400 ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ ಕಲ್ಪಿಸಲಾಗಿದೆ. ಅದೇ ರೀತಿ ಸಾರಡ್ಕದಿಂದ ಪುತ್ತೂರಿನ ಪರೀಕ್ಷೆ ಕೇಂದ್ರಕ್ಕೆ ಆಗಮಿಸಲು 45 ವಿದ್ಯಾರ್ಥಿಗಳಿಗೆ ಹಾಗೂ ಪಂಜಿಕಲ್ಲಿನಿಂದ ಸುಳ್ಯದ ಪರೀಕ್ಷೆ ಕೇಂದ್ರಕ್ಕೆ ಬರಲು 11 ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.