ಇತ್ತೀಚಿನ ಸುದ್ದಿ
ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು : ಬಿಜೆಪಿ ನಾಯಕ ಅಡ್ವಾಣಿ ಹೇಳಿದ್ದೇನು?
September 30, 2020, 2:07 PM

ನವದೆಹಲಿ(reporterkarnataka news): ಬಾಬರಿ ಮಸೀದಿ ಧ್ವಂಸ ಪ್ರಕರಣದ ಕುರಿತು ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ಬಿಜೆಪಿ ಹಿರಿಯ ನಾಯಕ ಎಲ್ . ಕೆ. ಅಡ್ವಾಣಿ ಸ್ವಾಗತಿಸಿದ್ದಾರೆ. ಈ ತೀರ್ಪು ರಾಮ ಮಂದಿರ ನಿರ್ಮಾಣ ಸಂಬಂಧ ತನ್ನ ನಿಲುವಿನ ಸಮರ್ಥನೆ ಎಂದು ಅಡ್ವಾಣಿ ಅಭಿಪ್ರಾಯಪಟ್ಟಿದ್ದಾರೆ.
ಅಡ್ವಾಣಿ ಅವರು ಇಂದು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಸಿಬಿಐ ವಿಶೇಷ ನ್ಯಾಯಾಲಯ ತೀರ್ಪನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಾಗತಿಸಿದ್ದಾರೆ. ಕಾಂಗ್ರೆಸ್, ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬಿಜೆಪಿ ನಾಯಕರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿತ್ತು ಎಂದು ಅವರು ಆರೋಪಿಸಿದ್ದಾರೆ.