11:02 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಹೆಲ್ತ್ ಟಿಪ್ಸ್ : ನಿಂಬೆ ಸಿಪ್ಪೆ ಎಸೆಯುವ ಮೊದಲು ಸ್ವಲ್ಪ ಇದನ್ನು ಓದಿ

August 1, 2020, 2:44 PM

ಪವಿತ್ರಾ ಶೆಟ್ಟಿ ಬ್ರಹ್ಮಾವರ

info.reporterKarnataka@gmail.com

ನಿಂಬೆಹಣ್ಣಿನ ಸಿಪ್ಪೆಯ ಉಪಯೋಗಗಳನ್ನು ನೀವು ಒಮ್ಮೆ ಕಲಿತರೆ ಮತ್ತೆ ಅದನ್ನು ಎಸೆಯುವ ತಪ್ಪನ್ನು ಕಂಡಿತಾ ಮಾಡಲಾರಿರಿ. ಇದರಲ್ಲಿ ಹೇರಳವಾದ ವಿಟಮಿನ್ ಸಿ ಕ್ಯಾಲ್ಸಿಯಂ ಪೊಟ್ಯಾಸಿಯಂ ಇದೆ. ಕ್ಯಾನ್ಸರ್ ಬರದಂತೆ ತಡೆಯುವ ಶಕ್ತಿ ಇದೆ. ಮೂಳೆಗಳ ಆರೋಗ್ಯವನ್ನು ಕಾಪಾಡುತ್ತದೆ. ಹಲ್ಲುಗಳನ್ನು ಸದೃಢ ಗೊಳಿಸುತ್ತದೆ. ಹೃದಯದ ಆರೋಗ್ಯಕ್ಕೆ ಒಳ್ಳೆಯದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದನ್ನು ಬಳಸುವ ವಿಧಾನ ತಿಳಿಯೋಣ.

ನಿಂಬೆ ಹಣ್ಣಿನ ಸಿಪ್ಪೆಯನ್ನು ಚೆನ್ನಾಗಿ ಒಣಗಿಸಿ ಮಿಕ್ಸಿಯಲ್ಲಿ ಪುಡಿ ಮಾಡಿ ಇಡಿ. ಒಂದು ಚಮಚ ಪುಡಿಗೆ ಒಂದು ಚಮಚ ಸಕ್ಕರೆ, ಜೇನು ತುಪ್ಪ, ಹಾಲು ಹಾಕಿ ಎಲ್ಲವನ್ನು ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಮುಖ ತೊಳೆಯಿರಿ. ಇದರಿಂದ ಗುಳ್ಳೆಗಳು ತೊಲಗಿ ಮುಖ ಫ್ರೆಶ್ ಆಗುತ್ತದೆ. ದಿನಕ್ಕೆ ಎರಡು ಬಾರಿ ಹೀಗೆ ಮಾಡಿ.

 ಒಂದು ಚಮಚ ನಿಂಬೆ ಸಿಪ್ಪೆಯ ಪುಡಿ ಒಂದು ಚಮಚ ಸ್ಯಾಂಡಲ್ ವುಡ್ ಪೌಡರ್ ಹಾಕಿ ಎರಡು ಚಮಚ ರೋಜ್ ವಾಟರ್, ಎರಡು ಚಮಚ ಹಾಲು ಹಾಕಿ ಮಿಶ್ರಣ ಮಾಡಿ ಇದನ್ನು ಮುಖ ಕುತ್ತಿಗೆಗೆ ಹಚ್ಚಿಕೊಳ್ಳಿ. ಇದರಿಂದ ನಿಮ್ಮ  ತ್ವಚೆ ಹೊಳಪು ಪಡೆಯುತ್ತದೆ. ಇದಕ್ಕೆ ತುಸು ಉಪ್ಪು ಸೇರಿಸಿ ಹಲ್ಲುಜ್ಜುವುದರಿಂದ ಹಲ್ಲುಗಳೂ ಹೊಳಪು ಪಡೆಯುತ್ತವೆ.

ಇತ್ತೀಚಿನ ಸುದ್ದಿ

ಜಾಹೀರಾತು