9:15 PM Friday26 - February 2021
ಬ್ರೇಕಿಂಗ್ ನ್ಯೂಸ್
ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ… ಮಂಗಳೂರಿನಲ್ಲಿ ಫೆ. 28ರಂದು ಕರಾವಳಿ ಜಾನಪದ ಜಾತ್ರೆ: ಸಚಿವ ಲಿಂಬಾವಳಿ ಉದ್ಘಾಟನೆ ಪಂಚ ರಾಜ್ಯಗಳ ಚುನಾವಣೆ: ಇಂದು ಸಂಜೆ 4.30ಕ್ಕೆ ಘೋಷಣೆ: ಎಲ್ಲೆಲ್ಲಿ ಎಲೆಕ್ಷನ್ ನಡೆಯಲಿ?… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು…

ಇತ್ತೀಚಿನ ಸುದ್ದಿ

13 ವರ್ಷದ ಬಳಿಕ ಬೆಂಗಳೂರಿನಲ್ಲಿ ಭೂಗತ ಪಾತಕಿ ರವಿ ಪೂಜಾರಿ ಸಹಚರನ ಬಂಧನ

August 7, 2020, 10:22 AM

ಬೆಂಗಳೂರು(reporterkarnatakanews): ಭೂಗತ ಪಾತಕಿ ರವಿ ಪೂಜಾರಿಯ ಸಹಚರನೊಬ್ಬನನ್ನು 13 ವರ್ಷದ ಬಳಿಕ ಬಂಧಿಸುವಲ್ಲಿ ಬೆಂಗಳೂರು ಪೊಲೀಸರ ವಿಶೇಷ ತಂಡ ಯಶಸ್ವಿಯಾಗಿದೆ. 

ಕಳೆದ 13 ವರ್ಷಗಳಿಂದ ಆರೋಪಿ ತಲೆಮರೆಸಿಕೊಂಡಿದ್ದ. ಬಂಧಿತ ಆರೋಪಿಯನ್ನು ಇಕ್ಲಾಕ್ ಖುರೇಷಿ ಎಂದು ಗುರುತಿಸಲಾಗಿದೆ. ಖುರೇಷಿ ಮೂಲತ: ಉತ್ತರಪ್ರದೇಶದ ನಿವಾಸಿಯಾಗಿದ್ದಾನೆ.

ಶಬನ್ನಮ್ ಡೆವಲಪರ್ಸ್  ಕಚೇರಿಯಲ್ಲಿ ನಡೆದ ಗುಂಡು ಹಾರಾಟದ ಪ್ರಕರಣ ಭಾರೀ ಸಂಚಲನ ಸೃಷ್ಟಿಸಿತ್ತು. ಇದೀಗ ಈ  ಪ್ರಕರಣಕ್ಕೆ  ಸಂಬಂಧಿಸಿದಂತೆ ಖುರೇಷಿಯನ್ನು ಬಂಧಿಸಲಾಗಿದೆ. ಆರೋಪಿಗಳಿಗೆ  ಖುರೇಷಿ ಪಿಸ್ತೂಲ್ ಪೂರೈಸಿದ್ದ ಎಂಬ ಮಾಹಿತಿ ತನಿಖೆಯಿಂದ ಬೆಳಕಿಗೆ ಬಂದಿತ್ತು.

ಬೆಂಗಳೂರಿನ ನಾಗಮಂಗಲದಲ್ಲಿ  ಆರೋಪಿ ಖುರೇಷಿ ನೆಲೆ ಕಂಡುಕೊಂಡಿದ್ದ. ಖುರೇಷಿಯನ್ನು ಈ ಹಿಂದೆ ಕೂಡ ಪೊಲೀಸರು ಬಂಧಿಸಿದ್ದರು. ಆದರೆ ಆ ಬಳಿಕ ಆತ ತಲೆಮರೆಸಿಕೊಂಡಿದ್ದ. ಬೆಂಗಳೂರು ಪೊಲೀಸರ ವಿಶೇಷ ತಂಡ ಈ  ಯಶಸ್ವಿ ಕಾರ್ಯಾಚರಣೆ ನಡೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು