ಇತ್ತೀಚಿನ ಸುದ್ದಿ
16ನೇ ದಿನಕ್ಕೆ ಕಾಲಿರಿಸಿದ ದಿಲ್ಲಿ ರೈತ ಘರ್ಜನೆ: ಇಂದಿನಿಂದ ಮತ್ತಷ್ಟು ತೀವ್ರ ಸ್ವರೂಪದ ಹೋರಾಟ
December 11, 2020, 9:49 AM

ನವದೆಹಲಿ(reporterkarnataka news): ಕೇಂದ್ರ ಸರ್ಕಾರದ ನೂತನ ಕೃಷಿ ನೀತಿ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 16ನೇ ದಿನಕ್ಕೆ ಕಾಲಿರಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ರಾಜಧಾನಿ ದೆಹಲಿಗೆ ಆಗಮಿಸುತ್ತಿದ್ದಾರೆ.
ಇಂದಿನಿಂದ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲು ರೈತ ಸಂಘಟನೆಗಳು ನಿರ್ಧರಿಸಿವೆ. ಕೇಂದ್ರ ಸರ್ಕಾರ ಮೂರು ಕಾನೂನುಗಳನ್ನು ರದ್ದುಪಡಿಸಬೇಕು. ಬದಲಾಗಿ ತಿದ್ದುಪಡಿ ಒಪ್ಪುವುದಿಲ್ಲ ಎಂದು ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ