7:20 AM Friday4 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಕಾಸರಗೋಡಿನಲ್ಲಿ ಒಂದೇ ದಿನ 40 ಕೊರೋನಾ ಪ್ರಕರಣ ವರದಿ

July 21, 2020, 3:37 PM

ಕಾಸರಗೋಡು(reporterkarnatkanews): ಕಳೆದ 24 ಗಂಟೆಯಲ್ಲಿ ಕೇರಳದಲ್ಲಿ ಹೊಸದಾಗಿ  720 ಕೊರೋನಾ ಪ್ರಕರಣ ವರದಿಯಾಗಿದೆ. ಕಾಸರಗೋಡಿನಲ್ಲಿ 40 ಕೊರೋನಾ ಪ್ರಕರಣ ದೃಢಪಟ್ಟಿದೆ. ಕರ್ನಾಟಕಕ್ಕೆ ಹೊಂದಿಕೊಂಡಿರುವ ಕಾಸರಗೋಡಿನ ಗಡಿ ಪ್ರದೇಶದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ ಎಂದು ವರದಿಯಾಗಿದೆ.

ಇದೇ ವೇಳೆ ಕೇರಳದಲ್ಲಿ ರೋಗಿಗಳ ಸಂಪರ್ಕದಿಂದ ರೋಗ ಹರಡುತ್ತಿರುವುದು ಆತಂಕ ಸೃಷ್ಟಿಸಿದೆ. ರಾಜಧಾನಿ ತಿರುವನಂತಪುರಂನಲ್ಲಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಾಸರಗೋಡು ಸೇರಿದಂತೆ ಗಡಿ ಪ್ರದೇಶಗಳಲ್ಲಿ   ನಿರ್ಬಂಧ ಕ್ರಮಗಳನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಎಲ್ಲ ಜಿಲ್ಲಾಧಿಕಾರಿಗಳಿಗೆ ಈ ಸಂಬಂಧ ಆದೇಶ ಹೊರಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು