7:33 PM Friday4 - December 2020
ಬ್ರೇಕಿಂಗ್ ನ್ಯೂಸ್
ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ

ಇತ್ತೀಚಿನ ಸುದ್ದಿ

ನಿಮಗೂ ಕೇಂದ್ರ ಸರಕಾರದಿಂದ 50ಲಕ್ಷ ರೂ. ಗೆಲ್ಲುವ ಅವಕಾಶ ! ಹೇಗೆ ? ಇಲ್ಲಿದೆ ಮಾಹಿತಿ…

September 22, 2020, 12:46 PM

ನವದೆಹಲಿ (reporter Karnataka news)

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಸಹಯೋಗದೊಂದಿಗೆ ಜಲ ಜೀವನ್ ಮಿಷನ್ ಅಡಿಯಲ್ಲಿ ಕೇಂದ್ರ ಸರ್ಕಾರ ಐಸಿಟಿ ಗ್ರ್ಯಾಂಡ್ ಚಾಲೆಂಜ್‌ನ್ನು ಆರಂಭಿಸಿದ್ದು, ಗೆದ್ದವರಿಗೆ 50 ಲಕ್ಷ ರೂ. ಈ ಬಹುಮಾನ ಲಭಿಸಲಿದೆ.

ಸ್ಟಾರ್ಟ್ ಅಪ್ ಗಳು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಮತ್ತು ಇತರ ಭಾರತೀಯ ಕಂಪನಿಗಳು ಸ್ಮಾರ್ಟ್ ನೀರು ಸರಬರಾಜು ಮಾಪನ ಮತ್ತು ಮೇಲ್ವಿಚಾರಣೆ ವ್ಯವಸ್ಥೆ ವಿನ್ಯಾಸಗೊಳಿಸುವ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.

ಸ್ಮಾರ್ಟ್ ವಾಟರ್ ಸಪ್ಲೈ ಅಳೆಯುವಿಕೆ ಮತ್ತು ಮಾನಿಟರಿಂಗ್ ಸಿಸ್ಟಂನ್ನು ಪರಿಣಾಮಕಾರಿಯಾಗಿ ಕಡಿಮೆ ವೆಚ್ಚದಲ್ಲಿ ಅಭಿವೃದ್ಧಿಪಡಿಸಬೇಕಾಗುತ್ತದೆ.

ಐಸಿಟಿ ಗ್ರ್ಯಾಂಡ್ ಚಾಲೆಂಜ್ ನಲ್ಲಿ ಪ್ರಥಮ ಸ್ಥಾನ ಪಡೆದ ವ್ಯಕ್ತಿ ಅಥವಾ ತಂಡಕ್ಕೆ 50 ಲಕ್ಷ ರೂ.ಗಳ ಬಹುಮಾನ ನೀಡಲಾಗುವುದು ದ್ವಿತೀಯ ಸ್ಥಾನ ಪಡೆದವರಿಗೆ 20 ಲಕ್ಷ ರೂ. ಯಶಸ್ವಿ ಡೆವಲಪರ್ ಗಳು ಕೆಲಸವನ್ನು ಪೂರ್ಣಗೊಳಿಸಲು MeitY-ಪ್ರಾಯೋಜಿತ ಇನ್ ಕ್ಯುಬೇಟರ್/CI ಗೆ ಸೇರುವ ಅವಕಾಶವನ್ನೂ ಪಡೆಯುತ್ತಾರೆ.

ICT ಗ್ರ್ಯಾಂಡ್ ಚಾಲೆಂಜ್ ಗೆ ಸಂಬಂಧಿಸಿದ ಎಲ್ಲಾ ರೀತಿಯ ವಿವರಗಳನ್ನು https://jjm.gov.in/ ವೆಬ್ ಸೈಟ್ ನಲ್ಲಿ ಒದಗಿಸಲಾಗಿದೆ.

ಇಡೀ ನೀರು ಸರಬರಾಜು ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸುವುದರಿಂದ ಅನೇಕ ಸಮಸ್ಯೆಗಳನ್ನು ಸಂಪೂರ್ಣವಾಗಿ ನಿವಾರಿಸಬಹುದು. ಆರಂಭದಲ್ಲಿ ದೇಶಾದ್ಯಂತ 100 ಹಳ್ಳಿಗಳಲ್ಲಿ ಜಲ ಜೀವನ್ ಮಿಷನ್ ಯೋಜನೆ ಜಾರಿಯಾಗಲಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು