ಇತ್ತೀಚಿನ ಸುದ್ದಿ
50 ಲಕ್ಷ ರೂಪಾಯಿ ಮೌಲ್ಯದ ಮಾದಕ ದ್ರವ್ಯ ವಶ: ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ
December 2, 2020, 9:12 AM

ಬೆಂಗಳೂರು(reporterkarnataka news): ಸಿಸಿಬಿ ಪೊಲೀಸರು 50 ಲಕ್ಷ ರೂಪಾಯಿ ಮೌಲ್ಯದ ಎಲ್ ಎಸ್ ಡಿ ಸ್ಟ್ರಿಪ್ ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ರಾಹುಲ್ ಮತ್ತು ದರ್ಶನ್ ಎಂದು ಗುರುತಿಸಲಾಗಿದೆ. ಆನ್ ಲೈನ್ ಮೂಲಕ ಆರೋಪಿಗಳು ಮಾದಕ ದ್ರವ್ಯ ಖರೀದಿಸುತ್ತಿದ್ದರು. ಇನ್ಸ್ ಪೆಕ್ಟರ್ ವಿರೂಪಾಕ್ಷ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.