ಇತ್ತೀಚಿನ ಸುದ್ದಿ
69.02 ಕೋಟಿ ವೆಚ್ಚದ ಕೂಳೂರು ನೂತನ ಸೇತುವೆಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಶಿಲಾನ್ಯಾಸ
December 19, 2020, 5:50 PM

ಮಂಗಳೂರು(reporterkarnataka news):
ರಾಷ್ಟ್ರೀಯ ಹೆದ್ದಾರಿ 66 ರ ಕೂಳೂರಿನಲ್ಲಿ ಸುಮಾರು
69.02 ಕೋಟಿ ರೂ. ವೆಚ್ಚದಲ್ಲಿ ಪಲ್ಗುಣಿ ನದಿಗೆ ಅಡ್ಡಲಾಗಿ ನೂತನವಾಗಿ ನಿರ್ಮಾಣವಾಗಲಿರುವ 6 ಪಥದ ಸೇತುವೆಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಶನಿವಾರ ಶಿಲಾನ್ಯಾಸ ನೆರವೇರಿಸಿದರು.
ಗಡ್ಕರಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕರ್ನಾಟಕದಲ್ಲಿ 25 ಹೆದ್ದಾರಿ ಯೋಜನೆಗಳ ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ 8 ಪೂರ್ಣಗೊಂಡ ಹೆದ್ದಾರಿಗಳ ಲೋಕಾರ್ಪಣೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದ ಗೌಡ, ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರು, ರಾಜ್ಯ ಸಚಿವ ಸಂಪುಟದ ಸದಸ್ಯರು, ಸಂಸದರು, ಶಾಸಕರು, ಪ್ರತಿನಿಧಿಗಳು ಉಪಸ್ಥಿತರಿದ್ದರು.