ಇತ್ತೀಚಿನ ಸುದ್ದಿ
ಡ್ರಗ್ಸ್ ವಿರುದ್ಧ ಬಂಟ್ವಾಳದಲ್ಲಿ ಎಪಿವಿಪಿ ವತಿಯಿಂದ ಸಹಿ ಸಂಗ್ರಹ ಅಭಿಯಾನ
September 15, 2020, 6:35 PM

ಬಂಟ್ವಾಳ(reporterkarnataka news)
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ವತಿಯಿಂದ ನಶಾ ಮುಕ್ತ ಭಾರತಕ್ಕಾಗಿ ಸಹಿ ಸಂಗ್ರಹ ಅಭಿಯಾನ ನಡೆಯಿತು.

ರಾಷ್ಟ್ರವ್ಯಾಪಿ ಅವ್ಯಾಹತವಾಗಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾದವರ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಾಗಬೇಕೆಂದು ಒತ್ತಾಯಿಸಿ ಸಹಿ ಸಂಗ್ರಹ ಅಭಿಯಾನವನ್ನು ಬಂಟ್ವಾಳ ಮಿನಿ ವಿಧಾನಸೌಧ ಮುಂಬಾಗದಲ್ಲಿ ನಡೆಸಲಾಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹಾಗೂ ಬಂಟ್ವಾಳ ತಾಲೂಕಿನ ತಹಶೀಲ್ದಾರ್ ರಶ್ಮಿ ಎಸ್ .ಆರ್. ಸಹಿ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಿಪಂ ಸದಸ್ಯ ರವೀಂದ್ರ ಕಂಬಳಿ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು, ಸಾರ್ವಜನಿಕರು ಸಹಿ ಹಾಕುವ ಮೂಲಕ ಬೆಂಬಲ ಸೂಚಿಸಿದರು.

ಈ ಸಂದರ್ಭದಲ್ಲಿ ಎಬಿವಿಪಿ ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಬಸವೇಶ್ ಕೋರಿ, ವಿಭಾಗ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು , ಹರ್ಷಿತ್ ಕೊಯಿಲ, ಅಖಿಲಾಷ್, ದಿನೇಶ್ ಕೊಯಿಲ, ನಿಶ್ಚಿತ್ ಬಂಟ್ವಾಳ್, ಹಿರಿಯ ಕಾರ್ಯಕರ್ತರಾದ ಪ್ರಣಮ್ ರಾಜ್ ಅಜ್ಜಿಬೆಟ್ಟು, ಮನೀಷ್ ರಾಯಿ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.