9:09 PM Thursday21 - January 2021
ಬ್ರೇಕಿಂಗ್ ನ್ಯೂಸ್
ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ… ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣ ವಚನ ಸ್ವೀಕಾರ: ಕಣ್ಣೀರು ಸುರಿಸಿದ… ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್…

ಇತ್ತೀಚಿನ ಸುದ್ದಿ

ಎಐಸಿಸಿಗೆ ಹೊಸ ಅಧ್ಯಕ್ಷರ ಹುಡುಕಾಟ: ಸಿದ್ದರಾಮಯ್ಯರಿಗೆ ಒಲಿಯಲಿದೆಯೇ ಪಟ್ಟ?

August 11, 2020, 2:36 AM

ನವದೆಹಲಿ(reporterkarnataka news): ಎಐಸಿಸಿ ಅಧ್ಯಕ್ಷ ಸ್ಥಾನದ ಕುರಿತು ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ.  ಗಾಂಧಿ ಕುಟುಂಬ ಹೊರತುಪಡಿಸಿ ಪಕ್ಷದ ಬೇರೆ ಪ್ರಬಲ ನಾಯಕರಿಗೆ ಅಧ್ಯಕ್ಷ ಪಟ್ಟ ಕಟ್ಟುವ ಕುರಿತು ಚಿಂತನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಮರ್ಥವಾಗಿ ಎದುರಿಸಬಲ್ಲ ನಾಯಕನ ಹುಡುಕಾಟ ನಡೆಯುತ್ತಿದ್ದು, ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಮುಂಚೋಣಿಯಲ್ಲಿದೆ.

ಪ್ರಸಕ್ತ ರಾಜಕೀಯ ಸನ್ನಿವೇಶದಲ್ಲಿ ವಂಶ ಪಾರಂಪರ್ಯ ಆಡಳಿತದ ಕಳಂಕದಿಂದ ತಪ್ಪಿಸಿಕೊಳ್ಳುವುದು ಪಕ್ಷಕ್ಕೆ ಅನಿವಾರ್ಯವಾಗಿದೆ. ಗಾಂಧಿ ಕುಟುಂಬಕ್ಕೆ ಸೇರದ ಪ್ರಬಲ ನಾಯಕನಿಗೆ ಪಟ್ಟಾಭಿಷೇಕ ಮಾಡುವುದು ಕಾಂಗ್ರೆಸ್ ಗೆ ಅನಿವಾರ್ಯವಾಗಿದೆ ಎಂದು ಪಕ್ಷದ ವಿಶ್ವಸನೀಯ ಮೂಲಗಳು ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿದೆ.

ದಿವಂಗತ ದೇವರಾಜ ಅರಸ್ ಬಳಿಕ ರಾಜ್ಯ ಕಾಂಗ್ರೆಸ್ ಗೆ ಪ್ರಬಲ ನಾಯಕತ್ವ ನೀಡಿದವರು ಸಿದ್ದರಾಮಯ್ಯ ಅವರು. ದೇವರಾಜ ಅರಸ್ ಬಳಿಕ ದೀರ್ಘಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದು ಕೂಡ ಸಿದ್ದರಾಮಯ್ಯ ಅವರೇ. ಬಿಜೆಪಿ ಅಧಿಕಾರದಲ್ಲಿದ್ದಾಗ ಪಾದಯಾತ್ರೆ ನಡೆಸಿ ಪಕ್ಷವನ್ನು ಪುನರ್ ಸಂಘಟಿಸಿ 2014ರ ಚುನಾವವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ಕೀರ್ತಿ ಕೂಡ ಅವರಿಗೆ ಸಲ್ಲುತ್ತದೆ. ಇದಲ್ಲದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಪ್ರಬಲ ಸ್ಪರ್ಧೆ ನೀಡಬಲ್ಲ ನಾಯಕ ಸಿದ್ದರಾಮಯ್ಯ ಎಂದು ಪರಿಗಣಿಸಲಾಗಿದೆ. ಈ ಎಲ್ಲ ಕಾರಣಗಳಿಂದ ಸಿದ್ದರಾಮಯ್ಯ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ನೇಮಿಸಿದರೆ ಅತಿಶಯೋಕ್ತಿ ಆಗಲಾರದು ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

ಸಿದ್ದರಾಮಯ್ಯ ಅವರನ್ನು ಕೇಂದ್ರಕ್ಕೆ ಕರೆಸಿಕೊಳ್ಳುವ ಉದ್ದೇಶದಿಂದಲೇ ಪಕ್ಷದ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿದೆ. ರಾಜ್ಯಸಭೆ ಸದಸ್ಯರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಅವರನ್ನು ವಿಧಾನ ಪರಿಷತ್ ಸದಸ್ಯನಾಗಿ ಮಾಡಿ ರಾಜ್ಯ ರಾಜಕಾರಣಕ್ಕೆ ಕಳುಹಿಸಿದ್ದು ಇದೇ ಉದ್ದೇಶಕ್ಕೆ ಎಂದು ವ್ಯಾಖ್ಯಾನಿಸಲಾಗಿದೆ. ಕೊರೊನಾ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೂರವಾಣಿ ಮೂಲಕ ಸಂಪರ್ಕಿಸಿ ಯೋಗಕ್ಷೇಮ ವಿಚಾರಿಸಿದ್ದರು.

ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸೋನಿಯಾ ಗಾಂಧಿ ಅವರು ಮಧ್ಯಂತರ ಅಧ್ಯಕ್ಷೆಯಾಗಿ ಮುಂದುವರಿದಿದ್ದಾರೆ. ಇದೀಗ ಆಗಸ್ಟ್ 10ಕ್ಕೆ ಸೋನಿಯಾ ಅವರ ಅಧಿಕಾರಾವಧಿ ಕೊನೆಗೊಂಡಿದೆ. ಪಕ್ಷದ ಇನ್ನೊಂದು ಮೂಲಗಳ ಪ್ರಕಾರ ಸೋನಿಯಾ ಗಾಂಧಿಯವರ ಅವಧಿ ವಿಸ್ತರಣೆಯಾಗುತ್ತದೆ ಎನ್ನಲಾಗಿದೆ. ಹಾಗೆ ರಾಹುಲ್ ಮತ್ತೆ ಅಧ್ಯಕ್ಷ ಸ್ಥಾನಕ್ಕೆ ಒಪ್ಪಿಕೊಳ್ಳುತ್ತಾರೆಯಾ ಎಂಬ ಜಿಜ್ಞಾಸೆಯೂ ಪ್ರಾರಂಭವಾಗಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ರಾಹುಲ್ ಮತ್ತೆ ಅಧ್ಯಕ್ಷ ಪೀಠವೇರುವ ಯಾವುದೇ ಲಕ್ಷಣ ಕಂಡು ಬರುತ್ತಿಲ್ಲ. ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಸೋನಿಯಾ ಗಾಂಧಿಯವರೇ ಅಧ್ಯಕ್ಷೆಯಾಗಿ ಮುಂದುವರಿಯಲಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು