ಇತ್ತೀಚಿನ ಸುದ್ದಿ
ಎಐಸಿಸಿ ಅಧ್ಯಕ್ಷ ಖರ್ಗೆಗೆ ಬಲ ನೀಡಿದ ಕರ್ನಾಟಕ ಫಲಿತಾಂಶ: ಕಾಂಗ್ರೆಸ್ ಗೆದ್ದ 9 ಸ್ಥಾನಗಳಲ್ಲಿ 5 ಕಲ್ಯಾಣ ಕರ್ನಾಟಕ ಭಾಗದ್ದು!
05/06/2024, 11:26

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು
info.reporterkarnataka@gmail.com
ಲೋಕಸಭೆ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷ ಡಬಲ್ ಡಿಜಿಟ್ ತಲುಪಲು ವಿಫಲವಾಗಿದೆ. ಆದರೂ ಈ ಫಲಿತಾಂಶವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೈಬಲಪಡಿಸಿದೆ. ಖರ್ಗೆ ನಾಯಕತ್ವಕ್ಕೆ ಮತದಾರರು ಜೈಹಾಕಿರುವುದು ಫಲಿತಾಂಶದಿಂದ ಸ್ಪಷ್ಟವಾಗಿದೆ.
ಕಳೆದ ಬಾರಿಯ ಚುನಾವಣಾ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಕಾಂಗ್ರೆಸ್ 8 ಸ್ಥಾನಗಳನ್ನು ಹೆಚ್ಚು ಪಡೆದಿದೆ. ಆದರೆ ಇದರಲ್ಲಿ ಹೆಚ್ಚಿನ ಸೀಟುಗಳುಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಲ್ಯಾಣ ಕರ್ನಾಟಕ ಭಾಗದಿಂದ ಪಡೆದ ಸ್ಥಾನಗಳಾಗಿವೆ. ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಇವೆಲ್ಲ ಕಲ್ಯಾಣ ಕರ್ನಾಟಕ ಪ್ರದೇಶದ ಕ್ಷೇತ್ರಗಳಾಗಿವೆ. ಕಲ್ಯಾಣ ಕರ್ನಾಟಕವನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಲ ಬಂದಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಜನಪರ ಭಾಗ್ಯ ಯೋಜನೆಗಳ ನಡುವೆಯೂ ತನ್ನ ತವರು ಜಿಲ್ಲೆಯಾದ ಮೈಸೂರಿನಲ್ಲಿ ಪಕ್ಷವನ್ನು
ಗೆಲ್ಲಿಸಲು ಸಾಧ್ಯವಾಗಲಿಲ್ಲ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬೆಂಗಳೂರು ಗ್ರಾಮಾಂತರದಲ್ಲಿ ತನ್ನ ಸೋದರ ಡಿ.ಕೆ. ಸುರೇಶ್ ಅವರನ್ನು ಸೋಲಿನ ದವಡೆಯಿಂದ ತಪ್ಪಿಸಲು ಸಾಧ್ಯವಾಗಲಿಲ್ಲ. ಅದಲ್ಲದೆ, ಬೆಂಗಳೂರಿನ ಎಲ್ಲ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸುವಂತಾಗಿದೆ.