11:44 PM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಏರ್ ಇಂಡಿಯಾ ಎಕ್ಸ್‌ಪ್ರೆಸ್ ದುಬೈ ಸಂಚಾರ ಇಂದಿನಿಂದ ಆರಂಭ: ಕೊರೊನಾ ಕಟ್ಟುನಿಟ್ಟಿನ ಕ್ರಮಕ್ಕೆ ವಾಗ್ದಾನ

September 19, 2020, 7:45 AM

ನವದೆಹಲಿ ( reporterkarnataka news): ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಸಂಚಾರ ಸೆ.19ರಿಂದ ಈ ಮುನ್ನ ನಿಗದಿಪಡಿಸಿದ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸಲಿವೆ.

ದುಬೈ ವಿಮಾನಯಾನ ಸಂಸ್ಥೆ ಈ ಕುರಿತು ಸ್ಪಷ್ಟಪಡಿಸಿದೆ.

ಕೊರೊನಾ ವೈರಸ್‌ ಪಾಸಿಟಿವ್ ಸರ್ಟಿಫಿಕೇಟ್ ಹೊಂದಿರುವ ಪ್ರಯಾಣಿಕರನ್ನು ಕರೆತಂದಿರುವ ಆರೋಪದ ಹಿನ್ನೆಲೆಯಲ್ಲಿ ಈ ಮುನ್ನ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನಗಳನ್ನು ಅಕ್ಟೋಬರ್‌ 2ರವರೆಗೆ ನಿಷೇಧಿಸಿ ದುಬೈ ನಾಗರಿಕ ವಾಯುಯಾನ ಪ್ರಾಧಿಕಾರ(ಡಿಸಿಎಎ) ಆದೇಶ ನೀಡಿತ್ತು. ಇದರಿಂದ ಎಚ್ಚೆತ್ತುಕೊಂಡ ಏರ್ ಇಂಡಿಯಾ ಎಕ್ಸ್ ಪ್ರೆಸ್ ಸಂಸ್ಥೆ, ವಿಮಾನ ಯಾನದಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿ, ಅಲ್ಲದೆ ಭವಿಷ್ಯದಲ್ಲಿ ಅಂತಹ ಯಾವುದೇ ತಪ್ಪು ಮರುಕಳುಹಿಸದಂತೆ ಎಚ್ಚರಿಕೆ ವಹಿಸುವುದಾಗಿ ಭರವಸೆ ನೀಡಿದೆ.

ಯುನೈಟೆಡ್ ಅರಬ್ ಎಮಿರೇಟ್ಸ್ ಸರಕಾರದ ನಿಯಮ ಪ್ರಕಾರ, ಭಾರತದಿಂದ ದುಬೈಗೆ ಪ್ರಯಾಣಿಸುವ ಪ್ರತಿಯೊಬ್ಬ ಪ್ರಯಾಣಿಕರು ಮೂಲ ಕೊರೊನಾ ನೆಗೆಟಿವ್ ಪ್ರಮಾಣಪತ್ರವನ್ನು ಪ್ರಯಾಣಕ್ಕೆ 96 ಗಂಟೆ ಮೊದಲು ಸಲ್ಲಿಸಬೇಕು. ಆದರೆ ಕಳೆದ ಸೆಪ್ಟೆಂಬರ್ 2ರಂದು ಕೊರೊನಾ ಪಾಸಿಟಿವ್ ಸರ್ಟಿಫಿಕೇಟ್ ಪಡೆದಿದ್ದ ಪ್ರಯಾಣಿಕ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಜೈಪುರ-ದುಬೈ ವಿಮಾನದಲ್ಲಿ ಸೆಪ್ಟೆಂಬರ್ 4ರಂದು ಸಂಚಾರ ನಡೆಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು