ಇತ್ತೀಚಿನ ಸುದ್ದಿ
ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತ ಪರಿಷತ್ ಸಮಾಲೋಚನೆ ಸಭೆ
November 26, 2020, 9:44 AM

ಬಂಟ್ವಾಳ:(reporterkarnataka):
ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತ ಪರಿಷತ್ತು ಬಂಟ್ವಾಳ ತಾಲೂಕು ಇದರ ಸಮಾಲೋಚನೆ ಸಭೆ ಬುಧವಾರದಂದು ಬಿ. ಸಿ. ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಜರಗಿತು.
ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎo. ಸುಬ್ರಹ್ಮಣ್ಯ ಭಟ್ ಅವರನ್ನು ಪರಿಷತ್ತು ವತಿಯಿಂದ ಸನ್ಮಾನಿಸಲಾಯಿತು ಬಂಟ್ವಾಳ ತಾಲೂಕು ಅಧ್ಯಕ್ಷ ವೇದಮೂರ್ತಿ ಶಿವರಾಮ ಮೈಯ್ಯ, ಜಿಲ್ಲಾಧ್ಯಕ್ಷ ವೇದಮೂರ್ತಿ ಕೃಷ್ಣರಾಜ ಭಟ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಕಶೆಕೋಡಿ ಸೂರ್ಯನಾರಾಯಣ ಭಟ್, ಎರುoಬು ಬಾಲಕೃಷ್ಣ ಕಾ ರoತ, ದೇವಸ್ಥಾನದ ಪ್ರಧಾನ ಅರ್ಚಕ ಮಾದಕಟ್ಟೆ ಈಶ್ವರ ಭಟ್ , ಸುದರ್ಶನ ಬಲ್ಲಾಳ , ಶ್ರೀನಿಧಿ ಮುಚ್ಚಿನ್ನಾಯ, ವೆಂಕಟರಮಣ ಭಟ್, ಪೈಕ ಕೆ. ವಾಸುದೇವ ಭಟ್, ನಾಗರಾಜ ಭಟ್ ಮಿ ತೋಟ, ಲಕ್ಷ್ಮೀಶ ಮಯ್ಯ ಮೊದಲಾದವರು ಉಪಸ್ಥಿತರಿದ್ದರು. ಮುಂದಿನ ಸಭೆಯನ್ನು ಪೊಳಲಿಯಲ್ಲಿ ನಡೆಸಲು ತೀರ್ಮಾನಿಸಲಾಯಿತು.