10:12 AM Wednesday25 - November 2020
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ತಂತ್ರಗಾರಿಕೆ ನಾಯಕ ಅಹಮ್ಮದ್ ಪಟೇಲ್ ಮಾರಕ ಕೊರೊನಾಕ್ಕೆ ಬಲಿ ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ 

ಇತ್ತೀಚಿನ ಸುದ್ದಿ

ಅಕ್ರಮ ಗಣಿಗಾರಿಕೆ ತಡೆಗೆ ಗ್ರಾಮೀಣ ಟಾಸ್ಕ್ ಫೋರ್ಸ್ ರಚನೆ: ಜಿಲ್ಲಾಧಿಕಾರಿ ಘೋಷಣೆ

November 22, 2020, 1:56 PM

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮವಾಗಿ ಕೆಂಪು ಗಣಿಗಾರಿಕೆ ಸೇರಿದಂತೆ ಯಾವುದೇ ಗಣಿಗಾರಿಕೆಯನ್ನು ಬೆಂಬಲಿಸುವ ಗ್ರಾಮ ಲೆಕ್ಕಾಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಎಚ್ಚರಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಡೆದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದರು.

ಕೆಂಪು ಕಲ್ಲು ಗಣಿಗಾರಿಕೆ ನಡೆಸುವ ವ್ಯಾಪ್ತಿಯಲ್ಲಿ ಗ್ರಾಮ ಲೆಕ್ಕಾಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನೊಳಗೊಂಡ  ಗ್ರಾಮೀಣ ಟಾಸ್ಕ್‌ಪೋರ್ಸ್ ರಚನೆ ಮಾಡಲಾಗುವುದು. 

ಗಣಿಗಾರಿಕೆಗೆ ಅನುಮತಿ ನೀಡುವಾಗ ಹಿರಿಯ ಭೂವಿಜ್ಞಾನಿ ಹಂತದಲ್ಲಿ ನೀಡಲಾಗುತ್ತಿದ್ದು, ಒಂದು ಕಡೆ ಗಣಿಗಾರಿಕೆಗೆ ಅನುಮತಿ ಪಡೆದು ಮತ್ತೊಂದು ಕಡೆ ಗಣಿಗಾರಿಕೆ ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿ  ಅಧಿಕಾರಿಗಳು ಒಂದು ವಾರದಲ್ಲಿ ಕಾರ್ಯಾಚರಣೆ ಆರಂಭಿಸಲಿದ್ದಾರೆ. ಪಟ್ಟಾ ಜಾಗದಲ್ಲಿ ಪರವಾನಗಿ ಪಡೆದು ಕಲ್ಲು ಗಣಿಗಾರಿಕೆಗೆ ನಡೆಸಲು ಅನುಮತಿ ನೀಡಲಾಗುವುದು. ಆದರೆ ಸರಕಾರಿ ಭೂಮಿ ಅಥವಾ ಇನ್ನಾವುದೇ ಪ್ರದೇಶದಲ್ಲಿ ಅನುಮತಿ ಪಡೆಯದೆ ಗಣಿಗಾರಿಕೆ ನಡೆಸುತ್ತಿದ್ದರೆ ಅಂತಹವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು. ಒಂದು ವೇಳೆ ಈ ಬಗ್ಗೆ ಗೊತ್ತಿದ್ದು  ಗ್ರಾಮ ಲೆಕ್ಕಾಧಿಕಾರಿ, ಪಿಡಿಒ ವೌನವಹಿಸಿದರೆ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ  ಸರ್ವೇ: ಅನಧಿಕೃತ ಕೆಂಪು ಕಲ್ಲು ಗಣಿಗಾರಿಕೆ ಬಗ್ಗೆ ಈಗಾಗಲೇ ದೂರುಗಳು ಬಂದಿದ್ದು, ಈ ಬಗ್ಗೆ ಸರ್ವೇ ನಡೆಸಿ ಪಟ್ಟಿ ಮಾಡಲಾಗುತ್ತಿದೆ. ಡಿ.20ರೊಳಗೆ ಈ ಪ್ರಕ್ರಿಯೆ ಪೂರ್ಣವಾಗಲಿದ್ದು, ಬಳಿಕ ಕ್ರಮಕೈಗೊಳ್ಳಲಾಗುವುದು. 

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಕಾರ್ಯಕಾರಿ ಸಮಿತಿ ಸದಸ್ಯ  ವಿಜಯ್ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು