ಇತ್ತೀಚಿನ ಸುದ್ದಿ
ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ
January 27, 2021, 12:06 PM

ಬೆಂಗಳೂರು(reporterkarnataka news):
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಇಲ್ಲಿನ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸಿದ ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ಕೊನೆಗೂ ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಆದರೆ ಉಸಿರಾಟದ ತೊಂದರೆ ಎದುರಿಸುತ್ತಿರುವ ಅವರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರೆಯಲಿದೆ.
2017 ರಲ್ಲಿ ಜೈಲು ಸೇರಿದ್ದ ಶಶಿಕಲಾ ಅವರ ಶಿಕ್ಷಾವಧಿ 2021 ಜನವರಿ 27 ರಂದು ಪೂರ್ಣಗೊಳ್ಳಲಿದೆ.ಅವರನ್ನು ಪರಪ್ಪನ ಅಗ್ರಹಾರದಿಂದ ತಮಿಳುನಾಡಿನ ತನಕ ಮೆರವಣಿಗೆಯಲ್ಲಿ ಕರೆದೊಯ್ಯಲು ಸಿದ್ಧತೆ ನಡೆಸಿದ್ದರು. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳ ಯೋಜನೆ ತಲೆ ಕೆಳಗಾಗಿದೆ.