ಇತ್ತೀಚಿನ ಸುದ್ದಿ
ಅಕುಲ್ , ಸಂತೋಷ್ ಗೆ ಸಿಸಿಬಿ ಗ್ರಿಲ್: ಸಂದೀಪ್ ಪಾಟೀಲ್ ನೇತೃತ್ವದಲ್ಲಿ ವಿಚಾರಣೆ ಆರಂಭ
September 19, 2020, 12:43 PM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ಸಮಗ್ರ ತನಿಖೆ ನಡೆಸುತ್ತಿರುವ ಸಿಸಿಬಿ ಇದೀಗ ನಿರೂಪಕ ಅಕುಲ್ ಬಾಲಾಜಿ ಮತ್ತು ನಟ ಸಂತೋಷ್ ಅವರನ್ನು ವಿಚಾರಣೆಗೆ ಗುರಿಪಡಿಸಿದೆ. ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ವಿಚಾರಣೆ ಮುಂದುವರಿದಿದೆ.
ಬೆಂಗಳೂರಿನಲ್ಲಿ ಹೊಂದಿರುವ ಆಸ್ತಿ ಕುರಿತ ದಾಖಲೆಗಳನ್ನು ಅಕುಲ್ ಬಾಲಾಜಿ ಮತ್ತು ಸಂತೋಷ್ ತನಿಖಾಧಿಕಾರಿಗಳಿಗೆ ನೀಡಿದ್ದಾರೆ. ಇದೇ ವೇಳೆ ನೋಟಿಸ್ ನೀಡಲಾಗಿರುವ ಯುವರಾಜ್ ಕೂಡ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ವೈಭವ್ ಜೈನ್ ಜತೆಗಿನ ಸಂಪರ್ಕದ ಬಗ್ಗೆ ಯುವರಾಜ್ ಅವರನ್ನು ಪ್ರಶ್ನಿಸಲಾಗಿದೆ ಎಂದು ವರದಿಯಾಗಿದೆ.