ಇತ್ತೀಚಿನ ಸುದ್ದಿ
ರಾಹುಲ್ ಗಾಂಧಿಗೆ ಜೈ ಹೋ ಎಂದ ರಾಜ್ಯ ಕಾಂಗ್ರೆಸ್ ನಾಯಕರು
August 24, 2020, 2:29 AM

ಬೆಂಗಳೂರು(reporterkarnataka news): ರಾಜ್ಯದ ಪ್ರಮುಖ ಕಾಂಗ್ರೆಸ್ ಮುಖಂಡರು ರಾಹುಲ್ ಗಾಂಧಿಗೆ ಬೆಂಬಲ ಘೋಷಿಸಿದ್ದಾರೆ. ಪಕ್ಷದ ಅಧ್ಯಕ್ಷ ಸ್ಥಾನವನ್ನು ರಾಹುಲ್ ಗಾಂಧಿ ವಹಿಸುವುದೇ ಸೂಕ್ತ ಎಂದು ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ಹಿರಿಯ ನಾಯಕರಾದ ಮಲ್ಲಿ ಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್,
ಈಶ್ವರ ಖಂಡ್ರೆ, ಸತೀಶ್ ಜಾರಕಿ ಹೊಳಿ ಮತ್ತು ಮುನಿಯಪ್ಪ ರಾಹುಲ್ ಗಾಂಧಿ ನಾಯಕತ್ವಕ್ಕೆ ಬೆಂಬಲ ಘೋಷಿಸಿದ್ದಾರೆ.
ಇಂದು ಹಂಗಾಮಿ ಅಧ್ಯಕ್ಷರನ್ನು ಕಾಂಗ್ರೆಸ್ ಆಯ್ಕೆ ಮಾಡುವ ಸಾಧ್ಯತೆಯಿದೆ. ಇನ್ನೊಂದೆಡೆ ನಾಯಕತ್ವ ಬದಲಾವಣೆಗೆ ಪತ್ರ ಬರೆದ 23 ಕಾಂಗ್ರೆಸ್ ನಾಯಕರಲ್ಲಿ ವೀರಪ್ಪ ಮೊಯ್ಲಿ ಕೂಡ ಸೇರಿದ್ದಾರೆ.