1:03 AM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ವಿಮರ್ಶ ಲೋಕದಿಂದ ಕಳಚಿದ ಕೊಂಡಿ : ಅಮರರಾದ ಜಿ.ಎಸ್.ಅಮೂರ

September 28, 2020, 11:48 AM

ಬೆಂಗಳೂರು (reporter Karnataka News)

ಹಿರಿಯ ಸಾಹಿತಿ, ವಿಮರ್ಶಕ ಡಾ.ಜಿ.ಎಸ್.ಆಮೂರ ವಯೋಸಹಜ ಅನಾರೋಗ್ಯದಿಂದಾಗಿ ಬೆಂಗಳೂರಿನಲ್ಲಿ ಸೋಮವಾರ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

ಹಾವೇರಿ ಜಿಲ್ಲೆಯ ಬೊಮ್ಮನಹಳ್ಳಿಯಲ್ಲಿ 1925ರ ಮೇ 8ರಂದು ಅವರ ಜನನವಾಗಿತ್ತು.  ಕರ್ನಾಟಕ ವಿಶ್ವವಿದ್ಯಾಲಯ, ಔರಂಗಾಬಾದ್ ನ ಮರಾಠವಾಡ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು.
1949ರಲ್ಲಿ ಮುಂಬಯಿ ವಿಶ್ವವಿದ್ಯಾಲಯದಿಂದ, ಎಂಎ ಪದವಿಗಳಿಸಿದ್ದರು.1985ರಲ್ಲಿ, ಔರಂಗಬಾದ್ ವಿವಿಯಲ್ಲಿ ಇಂಗ್ಲೀಷ್ ಪ್ರಾಧ್ಯಾಪಕ ಮತ್ತು ವಿಭಾಗ ಮುಖ್ಯಸ್ಥರಾಗಿ ನೇಮಕಗೊಂಡಿದ್ದರು.
ಅಧ್ಯಾಪಕರಾಗಿ ವೃತ್ತಿಜೀವನ ಪ್ರಾರಂಭಿಸಿದ್ದ ಅಮೂರ ಅವರು ‘ಕಾಮಿಡಿಯ ಪರಿಕಲ್ಪನೆ’ ಎಂಬ ಮಹಾಪ್ರಬಂಧಕ್ಕೆ ಗೌರವ ಡಾಕ್ಟರೇಟ್ ಪಡೆದಿದ್ದರು. ಕನ್ನಡ ಮತ್ತು ಆಂಗ್ಲ ಭಾಷೆಯ ಮೇಲೆ ಪಾಂಡಿತ್ಯ ಹೊಂದಿದ್ದ ಅವರು ಆಧುನಿಕ ಕನ್ನಡ ಸಾಹಿತ್ಯ ವಿಮರ್ಶಕರಲ್ಲಿ ಅಗ್ರಮಾನ್ಯರಾಗಿದ್ದರು. ಡಾ. ಅಮೂರ ಅವರು ಪಂಪ ಪ್ರಶಸ್ತಿ, ಕೇಂದ್ರ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದರು. ಇತ್ತೀಚೆಗೆ ಅವರಿಗೆ ನೃಪತುಂಗ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಪ್ರಶಸ್ತಿಯನ್ನು ಸ್ವೀಕರಿಸುವ ಮೊದಲೇ ಅವರು ಇಹಲೋಕ ತ್ಯಜಿಸಿರುವುದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ :
ಖ್ಯಾತ ಸಾಹಿತಿ, ವಿಮರ್ಶಕ ಡಾ: ಜಿ.ಎಸ್.ಅಮೂರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರ ನಿಧನದಿಂದ ಕನ್ನಡ ಸಾಹಿತ್ಯಲೋಕದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ’. ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಅಭಿಮಾನಿಗಳು ಮತ್ತು ಶಿಷ್ಯವೃಂದಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು