12:55 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಅಮೆರಿಕದಲ್ಲಿ ಭೀಕರ ಕಾರು ಅಪಘಾತ: ಭಾರತದ ಮೂವರು ಮಹಿಳೆಯರು ಸಾವು; ಇನ್ನೋರ್ವ ಗಂಭೀರ

29/04/2024, 11:02

ವಾಷಿಂಗ್ಟನ್ (reporterkarnataka.com):ಅಮೆರಿಕದ ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗುಜರಾತ್‌ನ ಮೂವರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಮೃತಪಟ್ಟವರನ್ನು ಗುಜರಾತಿನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಎಂದು ಗುರುತಿಸಲಾಗಿದೆ. ಅವರು ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ಎಸ್‌ಯುವಿ ಕಾರು ಅಪಘಾತದಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
I-85 ನಲ್ಲಿ ಉತ್ತರದ ಕಡೆಗೆ ಪ್ರಯಾಣಿಸುತ್ತಿದ್ದ ಎಸ್‌ಯುವಿ
ಕಾರು ಎಲ್ಲಾ ಲೇನ್‌ಗಳನ್ನು ದಾಟಿ ಒಡ್ಡುಗಳ ಮೇಲೇರಿ ಕೊನೆಗೆ ಸೇತುವೆಯ ಎದುರು ಭಾಗದಲ್ಲಿದ್ದ ಮರಗಳಿಗೆ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಕನಿಷ್ಠ 20 ಅಡಿಗಳಷ್ಟು ಎತ್ತರಕ್ಕೆ ಕಾರು ಹಾರಿದೆ. ಮಿತಿಗಿಂತ ಹೆಚ್ಚು ವೇಗದಲ್ಲಿ ಕಾರು ಚಲಾಯಿಸಿರುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ಮುಖ್ಯ ಉಪ ಕರೋನರ್ ಮೈಕ್ ಎಲ್ಲಿಸ್ ತಿಳಿಸಿದ್ದಾರೆ.
ಸ್ಥಳಕ್ಕೆ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದವು.
ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ದಕ್ಷಿಣ ಕೆರೊಲಿನಾದ ಸ್ಥಳೀಯ ಅಧಿಕಾರಿಗಳು ಘಟನೆ ಸಂಬಂಧ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು