10:24 PM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಟ್ರಂಪ್ ಮತ್ತೆ ಗೆಲುವು ಸಾಧ್ಯವೇ? , ಸಮೀಕ್ಷೆ ಏನು ಹೇಳುತ್ತದೆ?

August 21, 2020, 2:57 AM

ವಾಷಿಂಗ್ಟನ್ (reporterkarnatakanews): ಅಮೆರಿಕದ ಅಧ್ಯಕ್ಷೀಯ ಚುನಾವಣೆ ಕಾವು ಮೆಲ್ಲನೆ ಏರತೊಡಗಿದೆ. ಚುನಾವಣೆಯಲ್ಲಿ ಯಾರಿಗೆ ಗೆಲುವಾಗುತ್ತದೆ? ಯಾರಿಗೆ ಸೋಲಾಗುತ್ತದೆ? ವಾಷಿಂಗ್ಟನ್ ಪೋಸ್ಟ್ ನಡೆಸಿದ

ಸಮೀಕ್ಷೆ ಏನು ಹೇಳುತ್ತದೆ ಎಂಬುವುದನ್ನು ನೋಡೋಣ.

ಚುನಾವಣೆ ಕುರಿತಂತೆ ವಾಷಿಂಗ್ಟನ್ ಪೋಸ್ಟ್ ನಡೆಸಿದ ಸಮೀಕ್ಷೆ ಪ್ರಕಾರ ಆಡಳಿತರೂಢ ರಿಪಬ್ಲಿಕ್ ಪಕ್ಷಕ್ಕೆ ಹಿನ್ನಡೆಯುಂಟಾಗಿದೆ. ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಪಾಧ್ಯಕ್ಷ ಮೈಕ್ ಪೆನ್ಸ್ ಅವರಿಗಿಂತ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಜೋ ಬೈಡನ್ ಹಾಗೂ ಉಪಾಧ್ಯಕ್ಷ ಅಭ್ಯರ್ಥಿ, ಭಾರತೀಯ ಸಂಜಾತೆ ಕಮಲಾ ಹ್ಯಾರಿಸ್ ಮುನ್ನಡೆ ಸಾಧಿಸಿದ್ದಾರೆ.

ವಾಷಿಂಗ್ಟನ್ ಪೋಸ್ಟ್ ಸಮೀಕ್ಷೆಯಲ್ಲಿ ಬೈಡನ್ ಮತ್ತು ಕಮಲಾ ಅವರು ಶೇ. 53ರಷ್ಟು ಮತಗಳಿಸಿದ್ದಾರೆ. ಹಾಲಿ ಅಧ್ಯಕ್ಷ ಟ್ರಂಪ್ ಮತ್ತು ಪೆನ್ಸ್ ಜೋಡಿ ಶೇ. 41 ಮತಗಳಿಸಿದೆ. ಅಮೆರಿಕದ ಶೇ. 12ರಷ್ಟು ಹೆಚ್ಚು ಜನರು ಡೆಮಾಕ್ರಟಿಕ್ ಪಕ್ಷದ ಕುರಿತು ಒಲವು ತೋರಿಸಿದ್ದಾರೆ.

ಭಾರತದಲ್ಲಿ ಲೋಕಸಭೆ, ರಾಜ್ಯಸಭೆಗಳಿದ್ದ ಹಾಗೆ ಅಮೆರಿಕದಲ್ಲಿ ಹೌಸ್ ಆಫ್ ರೆಪ್ರಸೆಂಟೀಟಿವ್ ಮತ್ತು ಹೌಸ್ ಆಫ್ ಸೆನೆಟ್ ಇದೆ. ಎರಡಕ್ಕೂ ಪ್ರತ್ಯೇಕ ಚುನಾವಣೆ ನಡೆದು ಪ್ರತಿನಿಧಿಗಳು ಹಾಗೂ ಸೆನೆಟರ್ ಆಯ್ಕೆ ನಡೆಯುತ್ತದೆ. ಹೌಸ್ ಆಫ್ ರೆಪ್ರಸೆಂಟೀಟಿವ್ ನಲ್ಲಿ ಒಟ್ಟು 538 ಪ್ರತಿನಿಧಿಗಳು ಇರುತ್ತಾರೆ. ಇದರಲ್ಲಿ ಬಹುಮತಕ್ಕೆ 270 ಮತಗಳು ಬೇಕು. ಹೌಸ್ ಆಫ್ ಸೆನೆಟ್ ನಲ್ಲಿ 100 ಪ್ರತಿನಿಧಿಗಳಿದ್ದು, ಬಹುಮತಕ್ಕೆ 51ಮತಗಳು ಬೇಕು. ಅಮೆರಿಕದ ಅಧ್ಯಕ್ಷೀಯ ಚುನಾವಣೆ ಬ್ಯಾಲೆಟ್ ಪೇಪರ್ ನಲ್ಲಿ ನಡೆಯುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು