8:45 AM Wednesday27 - January 2021
ಬ್ರೇಕಿಂಗ್ ನ್ಯೂಸ್
ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ…

ಇತ್ತೀಚಿನ ಸುದ್ದಿ

ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ

December 4, 2020, 12:16 PM

ಕೋಲಾರ(reporterkarnataka news) : ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಲು ಸಹಕರಿಸಬೇಕು ಎಂದು ಡಾ.ಶಾಂತ ತಿಳಿಸಿದರು.  ನಗರದ ಕಾರಂಜಿಕಟ್ಟೆಯಲ್ಲಿರುವ ಶ್ರೀ ನಲ್ಲೂರಮ್ಮ ದೇವಿ ಅನಾಥ ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟಿನಲ್ಲಿ ಹಾಲುಮತ ಮಹಾಸಭಾ ಜಿಲ್ಲಾ ಶಾಖೆ ವತಿಯಿಂದ ನಡೆದ ೫೩೩ನೇ ಕನಕದಾಸ ಜಯಂತೋತ್ಸವ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. 

ಅನಾಥಾಶ್ರಮ ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವ ಮೂಲಕ ಸ್ವಂತ ಜೀವನ ಕಟ್ಟಿಕೊಳ್ಳುವಾಗೆ ಬೆಂಬಲ ನೀಡಬೇಕು ಎಂದು ನುಡಿದರು. ಕನಕದಾಸರಂತಹ ದರ್ಶನಿಕರ ಜೀವನಚರಿತ್ರೆಯ ಜ್ಞಾನವನ್ನು ಮಕ್ಕಳಿಗೆ ತಿಳಿ ಹೇಳಿ ಅವರ ಜೀವನಕ್ಕೆ ಮಾರ್ಗದರ್ಶನವಾಗಿಸಬೇಕು ಎಂದ ಅವರು ಮಕ್ಕಳಿಗೆ ಯಾವುದೇ ರೀತಿಯ ಸೌಲಭ್ಯ ಒದಗಿಸಲು ತಾನು ಸದಾ ಮುಂಚೂಣಿಯಲ್ಲಿರುತ್ತೇನೆ. ತನ್ನ ಸ್ವಂತ ಖರ್ಚಿನಲ್ಲಿ ಇವರ ಆರೋಗ್ಯ ಕಾಪಾಡುವುದಕ್ಕೆ ಬೇಕಾದ ಸಹಾಯ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಕನಕದಾಸರು ಕುಲ ಕುಲವೆಂದು ಹೊಡೆದಾಡದಿರಿ ಕುಲದ ನೆಲೆಯನ್ನು ಏನಾರದೂ ಬಲ್ಲಿರಾ ಎಂದು ತಮ್ಮ ಕೀರ್ತನೆಗಳ ಮೂಲಕ ಸಮಾಜಕ್ಕೆ ಜನರಲ್ಲಿದ್ದ ಮೌಢ್ಯಗಳನ್ನು ಹೋಗಲಾಡಿಸಲು ಶ್ರಮಿಸಿದ ಹರಿಕರಾರು ಎಂದು ಸಂಗೊಳ್ಳಿ ರಾಯಣ್ಣ ನೌಕರರ ಸಂಘದ ಜಿಲ್ಲಾಧ್ಯಕ್ಷ ಮುನಿರಾಜು ಉಪನ್ಯಾಸ ನೀಡಿದರು.

ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಎನ್.ಕೆ.ಗೋವಿಂದರಾಜು ಮಾತನಾಡಿ, ಹಾಲುಮತ ಮಹಾಸಭಾ ವತಿಯಿಂದ ಜಿಲ್ಲೆಯಲ್ಲಿ ಕನಕದಾಸರ ಜಯಂತಿ ಮೊಟ್ಟಮೊದಲ ಕಾರ್ಯಕ್ರಮ ನಡೆಸುತ್ತಿದ್ದೇವೆ. ಕನಕದಾಸರು ಒಂದು ಜಾತಿಗೆ ಸೀಮಿತವಲ್ಲ, ಅವರು ರಚಿಸಿರುವ ಕೃತಿಗಳ ಮೂಲಕ ಜಾತ್ಯತೀತವಾದ ಬೆಳವಣಿಗೆ ಕಾಣಬಹುದಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗಳು ಸ್ವತಂತ್ರವಾಗಿ ಬಾಳಬೇಕೆನ್ನುವುದೇ ಅವರ ಆಶಯವಾಗಿತ್ತು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ಹಾಲುಮತ ಮಹಾಸಭಾ ಗೌರವಾಧ್ಯಕ್ಷ ಸೊಣ್ನೂರು ವೆಂಕಟೇಶ್, ಸಂಘಟನಾ ಕಾರ್ಯದರ್ಶಿ ಶ್ರೀಕಾಂತ್, ಪದಾಧಿಕಾರಿಗಳಾದ ವಕೀಲರಾದ ಶ್ರೀನಿವಾಸ್, ಲಲಿತಮ್ಮ, ನಲ್ಲಾಂಡಹಳ್ಳಿ ರಮೇಶ್, ರಾಜು, ಮಂಜುನಾಥ್, ಕಿರಣ್ ಕುಮಾರ್, ಬೆಟ್ಟಪ್ಪ, ಭುವನೇಶ್ವರ್ ಮತ್ತಿತರರು ಉಪಸ್ಥಿತರಿದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಇತ್ತೀಚಿನ ಸುದ್ದಿ

ಜಾಹೀರಾತು