1:05 PM Saturday6 - March 2021
ಬ್ರೇಕಿಂಗ್ ನ್ಯೂಸ್
ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ  ಶ್ಲಾಘ್ಯದಲ್ಲಿ 10ನೇ ತರಗತಿ ಸಿಬಿಎಸ್ ಇ ಗಣಿತ, ವಿಜ್ಞಾನ ಟ್ಯೂಶನ್ ತರಗತಿಗೆ ಪ್ರವೇಶ… ಮಂಗಳೂರಿನಲ್ಲಿ ಹಸುಗೂಸುಗಳ ಬೃಹತ್ ಮಾರಾಟ ಜಾಲ ಪತ್ತೆ: ಗಂಡು ಮಗುವಿಗೆ 6 ಲಕ್ಷ,… ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪಾಲಿಕೆಗೆ ದೂರು ರವಾನೆಗೆ ಬರೋಬ್ಬರಿ 8…

ಇತ್ತೀಚಿನ ಸುದ್ದಿ

ಅನಧಿಕೃತ ಮಾಂಸ ಮಾರಾಟ ಮಾಡಿದರೆ ಪರವಾನಿಗೆ ರದ್ದು: ಮಂಗಳೂರು ಮಹಾನಗರಪಾಲಿಕೆ ಎಚ್ಚರಿಕೆ

October 23, 2020, 9:04 PM

ಮಂಗಳೂರು (reporterkarnataka news): ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಹೊರರಾಜ್ಯ ಮತ್ತು ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ಅನೇಕ ದೂರುಗಳು ಬಂದಿರುವುದರಿಂದ ಇನ್ನು ಮುಂದಕ್ಕೆ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ 20 ಬೀಫ್ ಸ್ಟಾಲ್‍ನಲ್ಲಿ ಬೇರೆ ರಾಜ್ಯ, ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡಿದರೆ ಪರವಾನಿಗೆ ರದ್ದು ಮಾಡಲಾಗುವುದು ಎಂದು ಪಾಲಿಕೆ ಪ್ರಕಟಣೆ ತಿಳಿಸಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮಾರಾಟಗಾರರು ಇನ್ನು ಮುಂದಕ್ಕೆ ಪಾಲಿಕೆಯ ಅಧೀನದಲ್ಲಿರುವ ಅಧಿಕೃತ ಕಸಾಯಿಖಾನೆಯಿಂದಲೇ ಮಾಂಸವನ್ನು ಪಡೆದು ಮಾರಾಟ ಮಾಡಬೇಕು. ಎಲ್ಲಾ ಬೀಫ್ ಸ್ಟಾಲ್ ಮಾಲಕರು ತಮ್ಮ ತಮ್ಮ ಅಂಗಡಿಗಳಲ್ಲಿ ಮಾರಾಟ ಮಾಡಲು ಮಾಂಸವನ್ನು ಕಸಾಯಿಖಾನೆಯಿಂದ ಪಡೆದಾಗ ಮಾಂಸವನ್ನು ಪಡೆದ ವಿವರದ ರಶೀದಿಯನ್ನು ಕಡ್ಡಾಯವಾಗಿ ಇರಿಸಬೇಕು. ಕಸಾಯಿಖಾನೆಗೆ ಮಾಂಸಕ್ಕಾಗಿ ಜಾನುವಾರುಗಳನ್ನು ಕೊಂಡೊಯ್ಯುವಾಗ ಆರ್.ಟಿ.ಒ.ದಿಂದ ಅಧಿಕೃತವಾಗಿ ನೋಂದಣಿಗೊಂಡ ಸ್ಪೆಷಲ್ ಪರ್ಮಿಶನ್ ವೈಕಲ್ (ಎಸ್.ಪಿ.ವಿ)ನಲ್ಲೇ ಸಾಗಿಸುವಂತೆ ಸಂಬಂಧಿತ ಕಸಾಯಿಖಾನೆ ಮಾಲಕರು ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ಮಹಾನಗರಪಾಲಿಕೆಯ ಮಹಾಪೌರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು