ಇತ್ತೀಚಿನ ಸುದ್ದಿ
ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಅರ್ಚಕರಿಗೆ ಕೊರೊನಾ: ಪ್ರವೇಶ ನಿರ್ಬಂಧ
October 9, 2020, 5:56 PM

ತಿರುವನಂತಪುರಂ(reporterkarnataka news): ಕೇರಳದ ತಿರುವನಂತಪುರಂನಲ್ಲಿರುವ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಅರ್ಚಕರೊಬ್ಬರಲ್ಲಿ ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದಿದೆ. ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿರುವ ಇತರ 10 ಸಿಬ್ಬಂದಿಯಲ್ಲಿ ಕೊರೋನಾ ಸೋಂಕಿನ ಲಕ್ಷಣ ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಕ್ಟೋಬರ್ 15ರ ತನಕ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ.