12:26 PM Thursday4 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಅನಾರೋಗ್ಯದಿಂದ ತಾಯಿ ಸಾವು: ಮೊದಲೇ ತಂದೆಯ ಕಳೆದುಕೊಂಡಿದ್ದ 9ರ ಹರೆದ ಮಗ ಅನಾಥ

25/07/2021, 09:21

ಸಿಂಧನೂರು(reporterkarnataka news): ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾದಾಗ ಚಿಕಿತ್ಸೆ ಫಲಿಸದೇ ತಾಯಿ ಮೃತಪಟ್ಟಿದ್ದು, 9 ವರ್ಷದ ಬಾಲಕ, ಮಹಿಳೆಯ ಪುತ್ರ ಅನಾಥವಾಗಿದ್ದಾನೆ.

17 ನೇ ವಾರ್ಡಿನ ನಿವಾಸಿ ಸರಸ್ವತಿ ( 32) ಮೃತರು. ಖಾಸಗಿ ಹೋಟೆಲೊಂದರಲ್ಲಿ‌ ಕೆಲಸ ಮಾಡುತ್ತಿದ್ದರು. ನಾಲ್ಕು ವರ್ಷದ ಹಿಂದೆ ಆಕೆಯ ಪತಿ ತೀರಿಕೊಂಡಿದ್ದರು. ಆಕೆಯ ಪುತ್ರ ಅಮರೇಶ ( 9)ನನ್ನು ಇಲ್ಲಿನ ರಡ್ಡಿ ಸ್ಕೂಲ್ ನಲ್ಲಿ 3 ನೇ ತರಗತಿಗೆ ಸೇರಿಸಿದ್ದಳು. ಅನಾರೋಗ್ಯದ ಹಿನ್ನೆಲೆಯಲ್ಲಿ ಎಂಟು ದಿನದ ಹಿಂದೆ ಇಲ್ಲಿನ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಳು. ಶುಕ್ರವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು. ಮೃತ ತಾಯಿ ಶವಗಾರದಲ್ಲೇ ಉಳಿದಿತ್ತು. ಆದರೆ, ಒಂಬತ್ತು ವರ್ಷದ ಮಗ, ತನ್ನ ತಾಯಿಯ ಅಂತ್ಯಸಂಸ್ಕಾರಕ್ಕೆ ಅವರಿವರನ್ನು ಗೊಗರೆಯುವಂತಾಗಿತ್ತು. 

ವಿಷಯ ತಿಳಿದು ಜೆಡಿಎಸ್ ಮುಖಂಡ ಬಸವರಾಜ್ ನಾಡಗೌಡ, ಅಭಿಷೇಕ್ ನಾಡಗೌಡ ಸೇರಿದಂತೆ ಇತರರು ಹೋಗಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು