1:03 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ರಾಂ ವಿಲಾಸ್ ಪಾಸ್ವಾನ್ ಇನ್ನಿಲ್ಲ

October 8, 2020, 9:31 PM

ನವದೆಹಲಿ( reporterkarnataka news): ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪ಼ಡೆಯುತ್ತಿದ್ದ ಕೇಂದ್ರ ಸಚಿವ  ರಾಂ ವಿಲಾಸ್ ಪಾಸ್ವಾನ್ ನಿಧನ ಹೊಂದಿದ್ದಾರೆ. ಅವರಿಗೆ 74 ವರ್ಷ ಪ್ರಾಯವಾಗಿತ್ತು. ಕೇಂದ್ರ ಸಚಿವ ಸಂಪುಟದಲ್ಲಿ ಅವರು ಆಹಾರ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು.

ಮೂರು ದಿನಗಳ ಹಿಂದೆ ಅವರಿಗೆ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ವರದಿಗಳ ಮಧ್ಯೆ ಅವರು ದಿಢೀರನೆ ಅಸು ನೀಗಿದ್ದಾರೆ.

ಕಳೆದ ಐದು ದಶಕಗಳಲ್ಲಿ ಸಕ್ರಿಯ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದ ಪಾಸ್ವಾನ್, ದೇಶದ ದಲಿತ  ರಾಜಕೀಯ ನಾಯಕರ ಸಾಲಿನಲ್ಲಿ ಮುಂಚೂಣಿಯಲ್ಲಿದ್ದರು. ಲೋಕ ಜನಶಕ್ತಿ  ಪಕ್ಷದ ಸಂಸ್ಥಾಪಕರಾಗಿದ್ದರು. ಪಾಸ್ವಾನ್ ಅವರ ಪುತ್ರ ಚಿರಾಗ್ ಪಾಸ್ವಾನ್  ಸಾಮಾಜಿಕ ಜಾಲ ತಾಣದ ಮೂಲಕ ತಮ್ಮ ತಂದೆ ನಿಧನ ಹೊಂದಿರುವ ಮಾಹಿತಿ ಬಹಿರಂಗಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು