7:27 AM Monday30 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಅಂಗನವಾಡಿ  ಕಾರ್ಯಕರ್ತೆ/ಸಹಾಯಕಿ ನೇಮಕಾತಿ ಪ್ರಕಟ 

August 26, 2020, 3:15 PM


ಮಂಗಳೂರು (reporterkarnataka news): ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ತಾತ್ಕಾಲಿಕ ನೇಮಕಾತಿ ಆಯ್ಕೆ ಪಟ್ಟಿ ಪ್ರಕ್ರಿಯೆಯಲ್ಲಿ  ಖಾಲಿ ಇರುವ 2 ಅಂಗನವಾಡಿ ಕಾರ್ಯಕರ್ತೆ ಹಾಗೂ 13 ಸಹಾಯಕಿಯರ ಆಯ್ಕೆ ಸಂಬಂಧ ನೇಮಕಾತಿ ಪ್ರಕ್ರಿಯೆ ನಡೆಸಲಾಗಿದೆ. 
    ಅದರಂತೆ 1 ಅಂಗನವಾಡಿ ಕಾರ್ಯಕರ್ತೆ ಹಾಗೂ 8 ಮಂದಿ ಸಹಾಯಕಿಯರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಲಾಗಿದ್ದು ಸದರಿ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ದ.ಕ. ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ಗ್ರಾ) ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. 
    ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್ 2 ರಂದು ಸಂಜೆ 5.30 ರೊಳಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಕಚೇರಿಗೆ ಆಕ್ಷೇಪಣೆ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.  
    ಹೆಚ್ಚಿನ ಮಾಹಿತಿಗಾಗಿ ದ.ಕ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು, ದೂರವಾಣಿ ಸಂಖ್ಯೆ 0824 2263199 ಸಂಪರ್ಕಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಗಳೂರು ಗ್ರಾಮಾಂತರ ಇವರ ಪ್ರಕಟಣೆ ತಿಳಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು