1:19 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಅಂತಾರಾಷ್ಟ್ರೀಯ ತುಳುಗೋಷ್ಠಿ ರದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

November 2, 2020, 8:45 AM

ಮಂಗಳೂರು(Reporter Karnataka News) ಮಂಗಳೂರು ವಿಶ್ವವಿದ್ಯಾಲಯ ಹಾಗೂ ವಿವಿಧ ಸಂಘಟನೆಗಳ ಸಹಕಾರದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ತುಳುಗೋಷ್ಠಿ ರದ್ದುಗೊಂಡಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ಕೂಡ ವ್ಯಕ್ತವಾಗುತ್ತಿದೆ.

ತುಳು ವಿಚಾರಗೋಷ್ಠಿಗೆ ದೆಹಲಿ ಜೆಎನ್‌ಯು ನಿವೃತ್ತ ಪ್ರಾಧ್ಯಾಪಕ, ಹಿರಿಯ ಸಂಶೋದಕ ಡಾ. ಪುರುಷೋತ್ತಮ ಬಿಳಿಮಲೆ ಅವರನ್ನು ಆಹ್ವಾನಿಸಲಾಗಿದ್ದು, ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್‌ನ ಸದಸ್ಯರೊಬ್ಬರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಪಡಿಸಲಾಗಿದೆ ಎನ್ನಲಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ವಿರೋಧ ವ್ಯಕ್ತಪಡಿಸಿದ ಸಿಂಡಿಕೇಟ್ ಸದಸ್ಯರ ಹೆಸರು ಬಹಿರಂಗಪಡಿಸಬೇಕು ಹಾಗೂ ಗೋಷ್ಠಿಯನ್ನು ರದ್ದು ಮಾಡಲು ನಿರ್ಧರಿಸಿದವರ ಹೆಸರನ್ನೂ ಬಹಿರಂಗಪಡಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

‘ನಮ್ಮ ಮಂಗಳೂರು ವಿಮಾನ ನಿಲ್ದಾಣವನ್ನು ಮಾರಿದ್ದರ ಬಗ್ಗೆ ವಿರೋಧ ಇಲ್ಲ, ಆದರೆ ಕನ್ನಡ , ತುಳುವಿಗೆ ಶ್ರಮಿಸಿದ ಬಿಳಿಮಲೆ ಸರ್ ಭಾಗವಹಿಸುತ್ತಾರೆ ಅನ್ನೋದಕ್ಕೆ ವಿರೋಧ’ ಎಂಬಿತ್ಯಾದಿ ಆಕ್ರೋಶದ ಹೇಳಿಕೆಗಳನ್ನು ಜಾಲ ತಾಣಗಳಲ್ಲಿ ವ್ಯಕ್ತಪಡಿಸಿದ್ದಾರೆ.

‘ಗೋಷ್ಠಿ ರದ್ದಾದ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ತಾಂತ್ರಿಕ ಕಾರಣಕ್ಕೆ ಮುಂದೂಡಿರಬೇಕು’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು