ಇತ್ತೀಚಿನ ಸುದ್ದಿ
ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್ ಪ್ರಮಾಣದ ಮಾದಕ ದ್ರವ್ಯ ವಶ
November 24, 2020, 4:09 PM

ಬೆಂಗಳೂರಿನಲ್ಲಿ ಬೃಹತ್ ಪ್ರಮಾಣದ ಮಾದಕ ದ್ರವ್ಯ ವಶ
ಬೆಂಗಳೂರು: ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಎನ್ ಸಿ ಬಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಜಾಲವನ್ನು ಭೇದಿಸಿದೆ. 6.870 ಕಿಲೋ ಮಾದಕ ದ್ರವ್ಯವಶಪಡಿಸಿಕೊಳ್ಳಲಾಗಿದೆ.
ಸ್ಯೂಡೊ ಫೆಡ್ರೈನ್ ಎಂಬ ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಎನ್ ಸಿ ಬಿ ನಾಲ್ಕು ಮಂದಿಯನ್ನು ಬಂಧಿಸಿದೆ. ಅಂತಾರಾಷ್ಟ್ರೀಯ ಮಾದಕ ದ್ರವ್ಯ ಜಾಲ ಭೇದಿಸಿರುವುದಾಗಿ ಎನ್ ಸಿ ಬಿ ಪ್ರಕಟಿಸಿದೆ.