8:59 AM Thursday3 - December 2020
ಬ್ರೇಕಿಂಗ್ ನ್ಯೂಸ್
ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ  ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ ಬುಕ್… ಮಂಗಳೂರು ಏರ್ಪೋರ್ಟ್‌ಗೆ ಕೋಟಿ ಚೆನ್ನಯ ಹೆಸರಿಡುವಂತೆ ಆಗ್ರಹಿಸಿ ಡಿ.7ರಂದು ಬೈಕ್ ಜಾಥಾ ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ ಪರ್ಷಿಯನ್ ಬೋಟ್ ಅವಘಡದಲ್ಲಿ ಸಾವನ್ನಪ್ಪಿದವರ ಶೋಕಾರ್ಥ ಮಂಗಳೂರು ಮೀನು ಮಾರುಕಟ್ಟೆ ಬಂದ್ ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ

ಇತ್ತೀಚಿನ ಸುದ್ದಿ

ಕುಟುಂಬಸ್ಥರು ತಿರಸ್ಕರಿಸಿದ ಕೋವಿಡ್ ಮೃತ ವ್ಯಕ್ತಿಯ ಅಂತ್ಯಸಂಸ್ಕಾರ ನೆರವೇರಿಸಿದ ಜಮೀರ್ ಅಹ್ಮದ್ ಹಾಗೂ ಬೆಂಬಲಿಗರು

August 24, 2020, 4:27 AM

ಬೆಂಗಳೂರು(reporter Karnataka News)

ಕೊರೊನಾ ಸೋಂಕಿನಿದ್ದ ಮೃತಪಟ್ಟ ವ್ಯಕ್ತಿಯ ಶವ ಸಿಗಲಿಲ್ಲ ಎಂದು ಕೆಲವು ಕಡೆ ಪ್ರತಿಭಟನೆ ನಡೆದರೆ ಇನ್ನೂ ಹಲವು ಕಡೆ ಕುಟುಂಬಸ್ಥರೇ ಶವವನ್ನು ಸ್ವೀಕರಿಸದ ಘಟನೆಗಳು ನಡೆಯುತ್ತಿವೆ.

ಕೊರೋನಾ ಸೋಂಕು ತಗುಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ವ್ಯಕ್ತಿಯ ಶವವನ್ನು ಕುಟುಂಬಸ್ಥರು ಸ್ವೀಕರಿಸದ್ದರಿಂದ ಬಿಬಿಎಂಪಿ ಸಹಭಾಗಿತ್ವದಲ್ಲಿ ಚಾಮರಾಜಪೇಟೆ ಶಾಸಕ ಜಮೀರ್‌ ಅಹಮದ್‌ ಖಾನ್‌ ಬೆಂಬಲಿಗರು ಅಂತ್ಯಕ್ರಿಯೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸುಮಾರು 63 ವರ್ಷದ ವ್ಯಕ್ತಿಯನ್ನು ಜುಲೈ ತಿಂಗಳ ಮೊದಲ ವಾರದಲ್ಲಿ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತ ಪಟ್ಟಿದ್ದರು.

ವ್ಯಕ್ತಿಯ ಮೃತದೇಹವನ್ನು ತೆಗೆದುಕೊಂಡು ಹೋಗುವಂತೆ ಮೃತರ ಸಂಬಂಧಿಕರಿಗೆ ಹಲವು ಬಾರಿ ಮನವಿ ಮಾಡಿದರೂ ಬರುವುದಾಗಿ ಹೇಳಿ ಇತ್ತ ಮುಖ ಮಾಡಿರಲಿಲ್ಲ.
ಆಸ್ಪತ್ರೆಯಿಂದ ಪದೇ ಪದೇ ಕರೆ ಬರುತ್ತಿರುವುದನ್ನು ತಪ್ಪಿಸಿಕೊಳ್ಳಲು ಆಸ್ಪತ್ರೆಯ ದೂರವಾಣಿ ಸಂಖ್ಯೆಯನ್ನು ಬ್ಲಾಕ್‌ ಮಾಡಿದ್ದರು.
ಅಲ್ಲದೆ, ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ಬಂದಿದ್ದ ಮೃತರ ಪುತ್ರ, ಅಂತ್ಯಕ್ರಿಯೆ ಮಾಡುವುದಕ್ಕೆ ನಮ್ಮಿಂದ ಸಾಧ್ಯವಿಲ್ಲ. ಮೃತದೇಹವನ್ನು ಬಿಬಿಎಂಪಿಗೆ ಹಸ್ತಾಂತರಿಸಲು ಸೂಚಿಸಿದ್ದರು. ಅಲ್ಲದೆ, ಸಂಪೂರ್ಣ ಚಿಕಿತ್ಸಾ ವೆಚ್ಚ ಪಾವತಿಸಿದ್ದರು ಎಂದು ಕಿಮ್ಸ್‌ ಆಸ್ಪತ್ರೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಬಿಬಿಎಂಪಿ ಸಿಬ್ಬಂದಿಯ ನೆರವಿನೊಂದಿಗೆ ಚಾಮರಾಜಪೇಟೆಯ ಶಾಸಕ ಜಮೀರ್‌ ಅಹಮದ್‌ ಖಾನ್‌ ‌ ಅವರ ಬೆಂಬಲಿಗರು ಸಾಂಪ್ರದಾಯಿಕವಾಗಿ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು