6:34 PM Monday18 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ…

ಇತ್ತೀಚಿನ ಸುದ್ದಿ

ಎಪಿಎಂಸಿ ಬಂದ್, ವ್ಯವಹಾರ ಸ್ಥಗಿತ : ಮಾರುಕಟ್ಟೆ ಪ್ರವೇಶ ದ್ವಾರದಲ್ಲಿ ಬೆಂಕಿ ಹಾಕಿ ಪ್ರತಿಭಟನೆ

December 21, 2020, 8:50 PM

ಶ್ರೀನಿವಾಸಪುರ(reporterkarnataka news): ಎಪಿಎಂಸಿ ಮಾರುಕಟ್ಟೆ ವರ್ತಕರು ಸೋಮವಾರ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಎಪಿಎಂಸಿ ಮಾರುಕಟ್ಟೆ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದರು.

  ಬೆಳಿಗ್ಗೆ ಮಾರುಕಟ್ಟೆಗೆ ಆಗಮಿಸಿದ ವರ್ತಕರು, ಮಾರುಕಟ್ಟೆ ಪ್ರವೇಶ ದ್ವಾರದಲ್ಲಿ ಬೆಂಕಿ ಹಾಕಿ ಲಾರಿಗಳು ಮಾರುಕಟ್ಟೆ ಪ್ರವೇಶಿಸುವುದನ್ನು ತಡೆದರು. ಅನಂತರ ಕೇಂದ್ರ  ಸರ್ಕಾರದ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಸೂದೆ ವಿರುದ್ಧ ಘೋಷಣೆ ಕೂಗಿದರು. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

  ಈ ಸಂದರ್ಭದಲ್ಲಿ ಪ್ರತಿಭಟನ ನಿರತ ವರ್ತಕರನ್ನು ಉದ್ದೇಶಿಸಿ ಟೊಮೆಟೊ ವರ್ತಕರ ಸಂಘದ ಅಧ್ಯಕ್ಷ ಎಚ್‌.ರವೀಂದ್ರರೆಡ್ಡಿ ಮಾತನಾಡಿ, ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವುದರ ಮೂಲಕ ಒಂದು ಒಪ್ಪಿತ ವ್ಯವಸ್ಥೆಯನ್ನು ಹಾಳುಗೆಡುವುತ್ತಿದೆ. ಮಾರುಕಟ್ಟೆ ಒಳಗೆ ಹಾಗೂ ಹೊರಗೆ ಶೇ.1ರಷ್ಟು ಸೆಸ್‌ ವಿಧಿಸುವುದರ ಮೂಲಕ ವ್ಯಾಪಾರಿ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಪಾದಿಸಿದರು.

    ವರ್ತಕರಾದ ವೆಂಕಟರಾಮರೆಡ್ಡಿ, ದಿವಾಕರ್‌, ಸರ್ದಾರ್‌ ಪಾಷ, ವರದರಾಜು, ಶ್ರೀನಿವಾಸರೆಡ್ಡಿ, ಚಂದ್ರ, ಬಾಬು, ಬೈರೆಡ್ಡಿ, ಶಿವಾ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು