1:20 PM Saturday6 - March 2021
ಬ್ರೇಕಿಂಗ್ ನ್ಯೂಸ್
ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ  ಶ್ಲಾಘ್ಯದಲ್ಲಿ 10ನೇ ತರಗತಿ ಸಿಬಿಎಸ್ ಇ ಗಣಿತ, ವಿಜ್ಞಾನ ಟ್ಯೂಶನ್ ತರಗತಿಗೆ ಪ್ರವೇಶ… ಮಂಗಳೂರಿನಲ್ಲಿ ಹಸುಗೂಸುಗಳ ಬೃಹತ್ ಮಾರಾಟ ಜಾಲ ಪತ್ತೆ: ಗಂಡು ಮಗುವಿಗೆ 6 ಲಕ್ಷ,… ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪಾಲಿಕೆಗೆ ದೂರು ರವಾನೆಗೆ ಬರೋಬ್ಬರಿ 8…

ಇತ್ತೀಚಿನ ಸುದ್ದಿ

ಸ್ನಾತಕೋತ್ತರ ವಿದ್ಯಾರ್ಥಿನಿ ಅಪಹರಣ ಪ್ರಕರಣ: ಆರೋಪಿಗೆ ನಿರೀಕ್ಷಣಾ ಜಾಮೀನು

October 20, 2020, 8:05 AM

ಮಂಗಳೂರು(reporterkarnataka news): ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯ ಅಪಹರಣ ಪ್ರಕರಣದ ಆರೋಪಿಗೆ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.

ಘಟನೆಯ ವಿವರ: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂತಿಮ ವರ್ಷದ ಎಂ.ಎಸ್ಸಿ. ಸ್ನಾತಕೋತ್ತರ ಪದವಿ ಓದುತ್ತಿದ್ದ ವಿದ್ಯಾರ್ಥಿನಿಯ ಅಪಹರಣ ಪ್ರಕರಣ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಬಗ್ಗೆ ವಿದ್ಯಾರ್ಥಿನಿಯ ತಂದೆ ನೀಡಿದ ದೂರಿನ ಅನ್ವಯ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು.

ಈ ಮಧ್ಯೆ, ಆರೋಪಿ ಮಡಿಕೇರಿ ನಿವಾಸಿ ಮುರಳಿರಾಜ್ ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆರೋಪಿ ಪರ ವಾದ ಆಲಿಸಿದ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಪಲ್ಲವಿ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ.

ಆರೋಪಿ ಪರ ನ್ಯಾಯವಾದಿ ಸುಕೇಶ್ ಕುಮಾರ್ ಶೆಟ್ಟಿ ವಾದ ಮಂಡಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು