9:42 PM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಆಸ್ಪತ್ರೆಯಲ್ಲಿ ತಾಯಿಯ ಆರೈಕೆಗೆ ಬಂದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

December 6, 2020, 2:26 PM

ಶಿವಮೊಗ್ಗ( reporterkarnataka news): ಕೊರೋನಾ ಸೋಂಕಿತ ತಾಯಿಯ ಆರೈಕೆಗಾಗಿ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿದ್ದ ಬಾಲಕಿಯೊಬ್ಬಳ ಮೇಲೆ ವಾರ್ಡ್ ಬಾಯ್ ಸೇರಿದಂತೆ ಮೂರು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

 ಆರೋಪಿ ಮನೋಜ್  ಪ್ರಕರಣದ ಪ್ರಮುಖ ಆರೋಪಿ. ಮನೋಜ್ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಕಳೆದ ಒಂದು ತಿಂಗಳಿನಿಂದ ಬಾಲಕಿಯ ತಾಯಿ  ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಬಾಲಕಿ ಮತ್ತು ತಾಯಿಗೆ ಮನೋಜ್ , ಊಟ ತಂದು ಕೊಡುತ್ತಿದ್ದ.

ಈ ಮಧ್ಯೆ  ಕರ್ಫ್ಯೂ ಹೇರಿದ್ದರಿಂದ  ಶಿವಮೊಗ್ಗದಲ್ಲಿ ಹೋಟೆಲ್ ಗಳು ಬಂದ್ ಆಗಿತ್ತು. ಹೀಗಾಗಿ ದೂರದಿಂದ ಕಾರಿನಲ್ಲಿ ಊಟ ತಂದು ಕೊಡುತ್ತೇನೆ ಎಂದು ಹೇಳಿ ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ  ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಆತನ ಇಬ್ಬರು ಸ್ನೇಹಿತರು ಕೂಡ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು