4:41 PM Saturday23 - January 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು

ಇತ್ತೀಚಿನ ಸುದ್ದಿ

ಆತಂಕ ಬೇಡ, ತಿನ್ನಲು ಮಲ್ಪೆ ಬಂದರಿನ ಮೀನು ಸೇಫ್; ನೋ ಫಾರ್ಮಲಿನ್: ಉಡುಪಿ ಜಿಲ್ಲಾಧಿಕಾರಿ

January 1, 2021, 7:45 PM

ಉಡುಪಿ(reporterkarnataka news):ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನಿಗೆ ಫಾರ್ಮಲಿನ್ ಬಳಕೆ ಮಾಡುತ್ತಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.

ಮಲ್ಪೆ ಬಂದರಿನಲ್ಲಿ ಮೀನಿಗೆ ಫಾರ್ಮಲಿನ್ ಬಳಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಡಿಸೆಂಬರ್ 18ರಂದು

ಆಹಾರ ಸುರಕ್ಷತಾ ಅಧಿಕಾರಿಗಳು ಮತ್ತು ಮೀನುಗಾರಿಕಾ ಅಧಿಕಾರಿಗಳು ಮಲ್ಪೆ ಬಂದರಿಗೆ ಭೇಟಿ ನೀಡಿದ್ದರು. ಪರಿಶೀಲನೆ ನಡೆಸಿದ ಅಧಿಕಾರಿಗಳ ತಂಡ 12 ಜಾತಿಯ ಮೀನುಗಳನ್ನು ಬೆಂಗಳೂರಿನ ಪ್ರಯೋಗ ಶಾಲೆಗೆ ಪರೀಕ್ಷೆಗೆ ಕಳುಹಿಸಿದ್ದರು. ಇದೀಗ ಅದರ ವರದಿ ಬಂದಿದ್ದು, ಮೀನಿನಲ್ಲಿ ಯಾವುದೇ ಫಾರ್ಮಲಿನ್ ಅಂಶ ಇರುವುದು ಕಂಡು ಬಂದಿಲ್ಲ.

ಫಾರ್ಮಲಿನ್ ಟೆಸ್ಟ್ ಕಿಟ್‌ನ್ನು ತರಿಸಲಾಗಿದ್ದು, ಮೀನಿನಲ್ಲಿ ಫಾರ್ಮಲಿನ್ ಇರುವ ಬಗ್ಗೆ ಪರೀಕ್ಷೆ ನಡೆಸಲಾಗುವುದರಿಂದ ಸಾರ್ವಜನಿಕರು ಆತಂಕಪಡುವ ಅವಶ್ಯಕತೆ ಇಲ್ಲ. ಫಾರ್ಮಲಿನ್ ಕಂಡುಬಂದರೆ ಮೀನಿನ ಆಹಾರ ಮಾದರಿಯನ್ನು ತೆಗೆದು ಪ್ರಯೋಗ ಶಾಲಾ ವಿಶ್ಲೇಷಣೆಗೆ ಕಳುಹಿಸಿ ಫಲಿತಾಂಶದ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು