ಇತ್ತೀಚಿನ ಸುದ್ದಿ
ಆತ್ಮ ನಿರ್ಭರ ಭಾರತ್ ಯೋಜನೆಗೆ ಬೇಕಿದೆ ಸಂಪನ್ಮೂಲ ವ್ಯಕ್ತಿ: ನೇಮಕ ಹೇಗೆ? ಮುಂದಕ್ಕೆ ಓದಿ
October 7, 2020, 8:56 PM

ಮಂಗಳೂರು(reporterkarnataka news): ಆತ್ಮನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ದಿಮೆಗಳ ಮಂತ್ರಾಲಯವು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆ ಹೊಸದಾಗಿ ಪ್ರಾರಂಭಿಸಿರುತ್ತದೆ. ಯೋಜನೆಯ ಅನುಷ್ಠಾನದಲ್ಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳು ಮಹತ್ತರ ಪಾತ್ರ ನಿರ್ವಹಿಸಬೇಕಾಗಿರುವ ಹಿನ್ನೆಲೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಅರ್ಜಿಗಳನ್ನು ಅಕ್ಟೋಬರ್ 9 ರೊಳಗೆ ಆಹ್ವಾನಿಸಿದೆ.
ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ ಅರ್ಹತೆ: ಆಹಾರ ತಂತ್ರಜ್ಞಾನ/ ಆಹಾರ ಇಂಜಿನಿಯರಿಂಗ್ನಲ್ಲಿ ಡಿಪ್ಲೋಮ/ ಪದವಿ – ಪ್ರತಿಷ್ಠಿತ ರಾಷ್ಟ್ರ/ ಅಂತರರಾಷ್ಟ್ರೀಯ ವಿಶ್ವವಿದ್ಯಾಲಯ/ ಸಂಸ್ಥೆಗಳು ಹಾಗೂ ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟದ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ 3 ರಿಂದ 5 ವರ್ಷಗಳ ಅನುಭವವಿರಬೇಕು. ಆಹಾರ ಸಂಸ್ಕರಣಾ ಕೈಗಾರಿಕೆ, ಬ್ಯಾಂಕಿಂಗ್, ಡಿಪಿಆರ್ ಸಿದ್ಧಪಡಿಸುವಿಕೆ ಹಾಗೂ ತರಬೇತಿಯಲ್ಲಿ ಅನುಭವವುಳ್ಳ ವ್ಯಕ್ತಿಯನ್ನು ಪರಿಗಣಿಸಲಾಗುವುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ ಅಥವಾ ಆಯಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.