11:21 AM Sunday17 - January 2021
ಬ್ರೇಕಿಂಗ್ ನ್ಯೂಸ್
ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ…

ಇತ್ತೀಚಿನ ಸುದ್ದಿ

ಆಯುಷ್ಮಾನ್ ಭಾರತ್ ಯೋಜನೆ: ಬಿಪಿಎಲ್ ಕಾರ್ಡ್‍ದಾರರಿಗೆ  5 ಲಕ್ಷದ ವರೆಗೆ ಉಚಿತ ಚಿಕಿತ್ಸೆ

August 13, 2020, 3:19 AM

ಮಂಗಳೂರು(reporterkarnataka news): ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯು ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತ ಯೋಜನೆಯಾಗಿದ್ದು, ಈ ಯೋಜನೆಯಲ್ಲಿ ಕೋವಿಡ್-19 ಚಿಕಿತ್ಸೆಯೂ ಸಹ ಸೇರ್ಪಡೆಯಾಗಿದೆ. 

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 240 ಸಾಮಾನ್ಯ ಸೇವಾ ಕೇಂದ್ರಗಳಿದ್ದು, ಸಾರ್ವಜನಿಕರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ತೆರಳಿ ಆಯುಷ್ಮಾನ್ ಭಾರತ್ ಕಾರ್ಡನ್ನು ಮಾಡಿಸಿಕೊಳ್ಳಬಹುದು. ಸಾರ್ವಜನಿಕರು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಕಾರ್ಡನ್ನು ಮಾಡಿಸುವ ಸಂಧರ್ಭದಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಪಾಡುವುದು ಅವಶ್ಯವಾಗಿರುತ್ತದೆ.

    ಬಿಪಿಎಲ್ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ವರ್ಷಕ್ಕೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಎಪಿಎಲ್ ಹೊಂದಿದ ಫಲಾನುಭವಿಗಳಿಗೆ ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ ಶೇಕಡ 30 ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ 1.50 ಲಕ್ಷ ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಸಹ ಚಿಕಿತ್ಸೆ ಪಡೆದುಕೊಳ್ಳಬಹುದು. 

      ಆಯುಷ್ಮಾನ್ ಕಾರ್ಡ್‍ನ ಕಾಗದದ ಪ್ರತಿಗೆ 10 ರೂ.ಹಾಗೂ ಪಿವಿಸಿ ಕಾರ್ಡ್‍ಗೆ  35 ರೂ. ಮೊತ್ತವನ್ನು ಸರಕಾರದಿಂದ ನಿಗದಿಪಡಿಸಿದ್ದು, ನಿಗದಿಪಡಿಸಿದ ಮೊತ್ತಕ್ಕಿಂತ ಹೆಚ್ಚಿನ ಮೊತ್ತವನ್ನು ಸಾರ್ವಜನಿಕರು ಪಾವತಿಸಬಾರದು. 

ಆಯಷ್ಮಾನ್ ಮಾಡಿದ್ದಲ್ಲಿ,  ಸಾರ್ವಜನಿಕರಿಂದ ನಿಗದಿಪಡಿಸಿದ ಮೊತ್ತಕ್ಕಿಂತ ಹೆಚ್ಚಿನ ಮೊತ್ತವನ್ನು ಪಡೆದುಕೊಂಡಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ದ.ಕ ಹಾಗೂ ಸಿ.ಎಸ್.ಸಿ ಜಿಲ್ಲಾ ವ್ಯವಸ್ಥಾಪಕರು, ದ.ಕ. ಅಥವಾ ಜಿಲ್ಲಾ ಯೋಜನಾ ವ್ಯವಸ್ಥಾಪಕರು, ಸೇವಾ ಸಿಂಧು, ದ.ಕ ಇವರಿಗೆ ದೂರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

      ಸೌಲಭ್ಯ ಮತ್ತು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸರಕಾರಿ ಆಸ್ಪತ್ರೆ, ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆ, ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿನ ಆರೋಗ್ಯ ಮಿತ್ರರು ಅಥವಾ ಆರೋಗ್ಯ ಸಹಾಯವಾಣಿ ಸಂಖ್ಯೆ 104 ಸಂಪರ್ಕಿಸುವಂತೆ ದ.ಕ. ಜಿಲ್ಲಾಧಿಕಾರಿ  ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು