ಇತ್ತೀಚಿನ ಸುದ್ದಿ
ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ
November 29, 2020, 9:44 AM

ಪ್ಯಾರಿಸ್ ನಲ್ಲಿ ಸರಕಾರದ ವಿರುದ್ಧ ಪ್ರತಿಭಟನೆ:
ಪ್ಯಾರಿಸ್: ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ಭಾರೀ ಹಿಂಸಾಚಾರ ಸಂಭವಿಸಿದೆ. ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯ ಪೋಟೋಗಳನ್ನು ತೆಗೆಯುವುದು ಶಿಕ್ಷಾರ್ಹ ಅಪರಾಧ ಎಂಬ ಕಾನೂನು ಜಾರಿ ಮಾಡಿದ್ದಕ್ಕೆ ವಿರೋಧ ವ್ಯಕ್ತವಾಗಿದೆ. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಪ್ಯಾರಿಸ್ ನಲ್ಲಿ ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ಬಲ ಪ್ರಯೋಗಿಸುತ್ತಿದ್ದಾರೆ. ಈ ದೃಶ್ಯಗಳನ್ನು ಸೆರೆ ಹಿಡಿದು ಸಾಮಾಜಿಕ ಜಾಲ ತಾಣಗಳಲ್ಲಿ ಹರಡಲಾಗುತ್ತಿದೆ. ಇದರಿಂದಾಗಿ ಗಲಭೆ ನಡೆಯುತ್ತಿದೆ ಎಂಬುದು ಪೊಲೀಸರ ವಾದ.
ಆದರೆ ಇದು ಸ್ವಾತಂತ್ಯದ ಉಲ್ಲಂಘನೆ ಎಂದು ಪ್ರತಿಭಟಾನಾಕರರು ಆರೋಪಿಸಿದ್ದಾರೆ. ಹಲವು ವಾಹನಗಳಿಗೆ ಬೆಂಕಿ ಹಚ್ಚಿ ನಾಶಮಾಡಲಾಗಿದೆ.