ಇತ್ತೀಚಿನ ಸುದ್ದಿ
ಬಾಬರಿ ಮಸೀದಿ ಧ್ವಂಸ ಪ್ರಕರಣ: ಎಲ್ಲ ಆರೋಪಿಗಳ ಖುಲಾಸೆ
September 30, 2020, 12:34 PM

ಲಕ್ನೋ(reporterkarnataka news): ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆರೋಪಿಗಳನ್ನು ಸಿಬಿಐ ನ್ಯಾಯಾಲಯ ಖುಲಾಸೆಗೊಳಿಸಿದೆ.
ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಸೇರಿದಂತೆ ಎಲ್ಲ ಆರೋಪಿಗಳಿಗೆ ಸಿಬಿಐ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ.
ಮಸೀದಿ ಧ್ವಂಸದಲ್ಲಿ ಷಡ್ಯಂತ್ರ ನಡೆದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.