ಇತ್ತೀಚಿನ ಸುದ್ದಿ
ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ
November 28, 2020, 6:20 PM

ಮಂಗಳೂರು(reporterkarnataka news):
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಜಾಲ್ ವಾರ್ಡಿನ ಆದರ್ಶ ನಗರ ಅಂಗನವಾಡಿಯ ಬಳಿ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು.
ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ಆದರ್ಶನಗರ ಅಂಗನವಾಡಿಯ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿರುವ ಕುರಿತು ಸ್ಥಳೀಯ ಮುಖಂಡರು ನನ್ನ ಗಮನಕ್ಕೆ ತಂದಿದ್ದರು. ಆ ಸಂದರ್ಭದಲ್ಲಿ ಅಧಿಕಾರಿಗಳನ್ನು ಕಳುಹಿಸಿ ರಸ್ತೆ ಪರಿಶೀಲನೆ ನಡೆಸಲು ಸೂಚನೆ ನೀಡಿದ್ದೆ. ಹಾಗೂ ಕಾಮಗಾರಿಗೆ ಬೇಕಾದ ಅನುದಾನ ಬಿಡುಗಡೆಗೊಳಿಸಿದ್ದೇನೆ. ಪ್ರಮುಖ ರಸ್ತೆಯಲ್ಲಿ ಕಾಮಗಾರಿ ನಡೆಯುವ ಕಾರಣ ಸಾರ್ವಜನಿಕರಿಗೆ ಅಲ್ಪಮಟ್ಟಿನ ಸಮಸ್ಯೆಯಾಗಬಹುದು. ಸಾರ್ವಜನಿಕರು ಪೂರಕವಾಗಿ ಸ್ಪಂದಿಸಿದರೆ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬಹುದು ಎಂದರು.
ಸ್ಥಳೀಯ ಮನಪಾ ಸದಸ್ಯರಾದ ಅಶ್ರಫ್, ಹಿಂದುಳಿದ ಮೋರ್ಚಾ ಕಾರ್ಯದರ್ಶಿ ಚಂದ್ರಶೇಖರ ಜಯನಗರ, ಶಕ್ತಿಕೇಂದ್ರ ಪ್ರಭಾರಿಗಳಾದ ಶಿವಾಜಿ ರಾವ್, ಮುಖಂಡರಾದ ಯಶವಂತ್ ಶೆಟ್ಟಿ, ಸುರೇಶ್ ಶೆಟ್ಟಿ, ನರಸಿಂಹ ಪೈ, ಚೆನ್ನಪ್ಪ,ಚಂದ್ರಹಾಸ್ ಕುಲಾಲ್, ಮನೋಜ್, ಪಕ್ಷದ ಕಾರ್ಯಕರ್ತರು, ಸ್ಥಳೀಯರು ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.