6:58 PM Friday2 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ…

ಇತ್ತೀಚಿನ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ: ರಾಜ್ಯದ 8 ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ ನಿರೀಕ್ಷೆ

18/08/2021, 16:20

ಮಂಗಳೂರು(reporterkarnataka.com): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ 8 ಜಿಲ್ಲೆಗಳ ವಿವಿಧೆಡೆ ಮುಂದಿನ 3 ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ.

ರಾಜ್ಯದ ಕರಾವಳಿ. ಮಲೆನಾಡು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಕಡೆಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ. ನೆರೆಯ ಕೇರಳ, ತಮಿಳುನಾಡಿನಲ್ಲೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ 7ರಿಂದ 11 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ 8 ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 3 ದಿನ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು