ಇತ್ತೀಚಿನ ಸುದ್ದಿ
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ: ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಹಠಾತ್ ಬಿರುಸಿನ ಮಳೆ
November 13, 2020, 7:48 PM

ಬೆಂಗಳೂರು(reporterkarnataka news): ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ಕರಾವಳಿ ಜಿಲ್ಲೆಗಳ ಹಲವೆಡೆ ಹಾಗೂ ದಕ್ಷಿಣ ಒಳನಾಡಿನಲ್ಲಿ ಶನಿವಾರ ಬಿರುಸಿನ ಮಳೆಯಾಗಿದೆ. ರಾಜ್ಯದಲ್ಲಿ ಇನ್ನೆರಡು ದಿನ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಶನಿವಾರ ರಾತ್ರಿ 7 ಗಂಟೆಯ ಬಳಿಕ ಮಳೆಯಾಗಿದೆ. ಮಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ಮೋಡ ಕವಿದು ದಿನದ ಇಳಿ ಹೊತ್ತಿನಲ್ಲಿ ಬಿರುಸಿನ ಮಳೆಯಾಯಿತು. ದೀಪಾವಳಿ ಸಮಯದಲ್ಲಿ ಕರಾವಳಿ ಭಾಗದಲ್ಲಿ ಒಂದೆರಡು ಮಳೆಯಾಗುವುದು ಮಾಮೂಲಿಯಾಗಿದೆ.
ವಾಯುಭಾರ ಕುಸಿತ, ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ಆಗಸ್ಸ್ ತಿಂಗಳಿನಲ್ಲಿ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗಿತ್ತು. ಅಕ್ಟೋಬರ್ ನಲ್ಲಿಯೂ ಭಾರಿ ಮಳೆಯಾಗಿದೆ ರಾಜ್ಯದಲ್ಲಿ ಪ್ರವಾಹ ತಲೆದೋರಿತ್ತು.