ಇತ್ತೀಚಿನ ಸುದ್ದಿ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ:ತಮಿಳುನಾಡಿಗೆ ನಿವಾರ್ ಚಂಡಮಾರುತ ಭೀತಿ
November 23, 2020, 2:48 PM

ಚೆನ್ನೈ(reporterkarnataka news): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಿದೆ. ಇದು ಚಂಡಮಾರುತವಾಗಿ ಬದಲಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಚಂಡಮಾರುತಕ್ಕೆ ನಿವಾರ್ ಎಂದು ಹೆಸರಿಡಲಾಗಿದೆ.
ಮುಂದಿನ ಎರಡು ದಿನಗಳಲ್ಲಿ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.