ಇತ್ತೀಚಿನ ಸುದ್ದಿ
2008 ಬೆಂಗಳೂರು ಸ್ಫೋಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
September 22, 2020, 8:06 AM

ನವದೆಹಲಿ( reporterkarnataka news): ರಾಜಧಾನಿ ಬೆಂಗಳೂರಿನಲ್ಲಿ 2008ರಲ್ಲಿ ಸಂಭವಿಸಿದ ಸರಣಿ ಸ್ಫೋಟ ಪ್ರಕರಣದ ಇಬ್ಬರು ಆರೋಪಿಯೊಬ್ಬಗಳನ್ನು ಕೇರಳದ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಆರೋಪಿಗಳು ಕಳೆದ 12 ವರ್ಷಗಳಿಂದ ತಲೆ ಮರೆಸಿಕೊಂಡಿದ್ದರು.ವಿಮಾನದಿಂದ ಇಳಿಯುತ್ತಿದ್ದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಲ್ಲಿ ಓರ್ವನನ್ನು ಶೋಯೆಬ್ ಎಂದು ಗುರುತಿಸಲಾಗಿದೆ. ಭಯೋತ್ಪಾದನಾ ನಿಗ್ರಹ ದಳ ಮತ್ತು ರಾಷ್ಟ್ರೀಯ ತನಿಖಾದಳ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ
2008 ಜುಲೈ 25 ರಂದು ಬೆಂಗಳೂರಿನಲ್ಲಿ ಸರಣಿ ಸ್ಫೋಟ ಸಂಭವಿಸಿತ್ತು. ಈ ಸ್ಫೋಟದಲ್ಲಿ ಒಬ್ಬರು ಪ್ರಾಣ ಕಳೆದುಕೊಂಡಿದ್ದರು. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.