ಇತ್ತೀಚಿನ ಸುದ್ದಿ
ಬೆಂಗಳೂರಿನ ಗಲಭೆಗ್ರಸ್ತ ಪ್ರದೇಶದಲ್ಲಿ ಪರಿಸ್ಥಿತಿ ಶಾಂತ: ಆರೋಪಿ ನವೀನ್ ಪೊಲೀಸ್ ಕಸ್ಟಡಿಗೆ
August 13, 2020, 3:22 AM

ಬೆಂಗಳೂರು(reporterkarnataka news): ನಗರದಲ್ಲಿ ಭುಗಿಲೆದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಫೇಸ್ ಬುಕ್ ಪೋಸ್ಟ್ ಮಾಡಿದ್ದ ಆರೋಪಿ ನವೀನ್ ನನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ನ್ಯಾಯಾಧೀಶರು ಆರೋಪಿಯನ್ನು ಐದು ದಿನಗಳ ಪೊಲೀಸ್ ವಶಕ್ಕೆ ನೀಡಿದ್ದಾರೆ.
ಹೆಚ್ಚಿನ ವಿಚಾರಣೆ ನಡೆಸಲು ಆರೋಪಿಯನ್ನು ತಮ್ಮ ವಶಕ್ಕೆ ನೀಡಬೇಕೆಂಬ ಪೊಲೀಸರ ಮನವಿಯನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ. ಇದೇ ವೇಳೆ ಗಲಭೆ ಭುಗಿಲೆದ್ದ ಬೆಂಗಳೂರಿನ ದೇವರ ಜೀವನ ಹಳ್ಳಿ ಮತ್ತು ಕಾಡುಗೊಂಡನ ಹಳ್ಳಿಯಲ್ಲಿ ಪರಿಸ್ಥಿತಿ ಇದೀಗ ಶಾಂತವಾಗಿದೆ. ನಗರದಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.
ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ 146 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆಗಳಿವೆ.