10:44 AM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

IPL : ಚೆನ್ನೈ ದೋಣಿಯನ್ನು ಮುಳುಗಿಸಿದ ಬೆಂಗಳೂರಿಗೆ ಭರ್ಜರಿ ಜಯ..!!

October 10, 2020, 11:48 PM

ದುಬಾಯಿ (Reporter Karnataka News)

ಐಪಿಎಲ್ 13ನೇ ಆವೃತ್ತಿಯ 25ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 37 ರನ್‌ಗಳ ಭರ್ಜರಿ ಗೆಲುವನ್ನು ದಾಖಲಿಸಿತು.

ದುಬಾಯಿಯಲ್ಲಿ ನಡೆದ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಎಲ್ಲ ವಿಭಾಗಗಳಲ್ಲೂ ಉತ್ತಮ ಪ್ರದರ್ಶನ ನೀಡಿದ ಕೊಹ್ಲಿ ಪಡೆ ಮತ್ತೊಂದು ಗೆಲುವು ಸಂಪಾದಿಸುವಲ್ಲಿ ಯಶಸ್ವಿಯಾಗಿದೆ.

ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು ನಿಧಾನ ಗತಿಯಲ್ಲಿ ಇನ್ನಿಂಗ್ಸ್ ಕಟ್ಟಿದರೂ ನಾಯಕ ವಿರಾಟ್ ಕೊಹ್ಲಿಯ 90 ರನ್‌ಗಳ ನೆರವಿನಿಂದ 169-4 ರನ್ನುಗಳ ಉತ್ತಮ ಮೊತ್ತ ಪೇರಿಸಿತು. ಇದನ್ನು ಬೆನ್ನಟ್ಟಿದ ಚೆನ್ನೈ ಆರಂಭದಲ್ಲೇ ಇನ್ ಫಾರ್ಮ್ ಬ್ಯಾಟ್ಸ್‌ಮಾನ್‌ಗಳಾದ ಪ್ಲೆಸಿಸ್ ಹಾಗೂ ಶೇನ್ ವಾಟ್ಸನ್ ವಿಕೆಟ್‌ಗಳನ್ನು ಬೇಗನೇ ಕಳೆದುಕೊಂಡು ಒದ್ದಾಡಿತು. ಇವರ ವಿಕೆಟ್‌ಗಳನ್ನು ವಾಷಿಂಗ್ಟನ್ ಸುಂದರ್ ಕಿತ್ತರು. ಬಳಿಗೆ ಎಲ್ಲಿಯೂ ಹೋರಾಟವನ್ನು ನೀಡದ ಚೆನ್ನೈ ಸೋಲನುಭವಿಸಬೇಕಾಯಿತು.
20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 132 ರನ್ ಗಳಿಸಲಷ್ಟೆ ಶಕ್ತವಾಯಿತು. ಮತ್ತೆ ತಂಡ ಸೇರಿಕೊಂಡ ಕ್ರಿಸ್ ಮಾರಿಸ್ 3 ವಿಕೆಟ್ ಕಬಳಿಸಿದರು.
ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಟ ಪುರಸ್ಕಾರ ಪಡೆದುಕೊಂಡರು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ 5ನೇ ಸೋಲುಕಂಡಿದ್ದು, ಬೆಂಗಳೂರು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ನೆಗೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು