12:34 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಬಂಟ್ವಾಳದಲ್ಲಿ ಎಬಿವಿಪಿ ವತಿಯಿಂದ  ಪತ್ರ ಚಳುವಳಿ: ಮುಖ್ಯಮಂತ್ರಿಗೆ ರವಾನೆ

September 26, 2020, 6:46 PM

ಬಂಟ್ವಾಳ(reporterkarnataka news):

ಮಾದಕ ವಸ್ತುಗಳ ಬಳಕೆ ಇಂದು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ವ್ಯಾಪಿಸಿದೆ.ಈ ಜಾಲಕ್ಕೆ ಪ್ರಮುಖವಾಗಿ ಕಾಳೆಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯುವ ಸಮುದಾಯವೇ ಬಲಿಯಾಗುತ್ತಿರುವುದು ಅಪಾಯಕಾರಿ ಸಂಗತಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಬಹು ಪ್ರಭಾವಿಗಳು ಭಾಗಿಯಾಗಿರುವ ಈ ಜಾಲವನ್ನು ಮಟ್ಟ ಹಾಕುವ ಸವಾಲು ರಾಜ್ಯ ಸರ್ಕಾರದ ಮುಂದಿದೆ. ಅದಕ್ಕಾಗಿ ಪ್ರಬಲ ಕಾನೂನನ್ನು ರೂಪಿಸುವುದು ಮಾತ್ರ ಪರಿಹಾರ .ಸರ್ಕಾರ ನಿಷ್ಪಕ್ಷಪಾತ ತನಿಖೆ ಹಾಗೂ ಕಾನೂನನ್ನು ರೂಪಿಸಿ ಈ ದಂಧೆಯ ವಿರುದ್ದ ಸಮರ ಸಾರಬೇಕೆಂದು ಎಬಿವಿಪಿಯು ಪತ್ರ ಚಳುವಳಿಯ ಮೂಲಕ ಆಗ್ರಹಿಸಲಾಯಿತು. ಪತ್ರವನ್ನು ಮುಖ್ಯಮಂತ್ರಿಗಳ ವಿಳಾಸಕ್ಕೆ ಕಳುಹಿಸಿಕೊಡಲಾಯಿತು.

ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯಾ ವಿರುದ್ದ ಸೂಕ್ತ ಕಾನೂನನ್ನು ರೂಪಿಸಿ ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ವತಿಯಿಂದ ರಾಜ್ಯಾದ್ಯಂತ ಪತ್ರ ಚಳುವಳಿಗೆ ಕರೆ ನೀಡಿತ್ತು ಇದರ ಅಂಗವಾಗಿ ಶನಿವಾರ ಬಂಟ್ವಾಳ ಶಾಖೆ ವತಿಯಿಂದ ಬಿಸಿರೋಡು ಹಾಗೂ ಸಿದ್ದಕಟ್ಟೆ ಅಂಚೆ ಕಚೇರಿ ಬಳಿ ಪತ್ರ ಚಳುವಳಿಯನ್ನು ಹಮ್ಮಿಕೊಂಡಿದೆ.

ಈ ಸಂದರ್ಭದಲ್ಲಿ ತಾಲೂಕು ಸಂಚಾಲಕರಾದ ಹರ್ಷಿತ್ ಕೊಯಿಲ, ಸಹ ಸಂಚಾಲಕರಾದ ದಿನೇಶ್ ಕೊಯಿಲ, ನಗರ ಕಾರ್ಯದರ್ಶಿ ಅಖಿಲಾಷ್, ಕಾಲೇಜು ಘಟಕದ ಅದ್ಯಕ್ಷರಾದ ಗುರುಪ್ರಸಾದ್ ಸಿದ್ದಕಟ್ಟೆ, ನಗರ ಸಹ ಕಾರ್ಯದರ್ಶಿಗಳಾದ ನಾಗರಾಜ್ ಶೆಣೈ , ಗಗನ್ ,ಪ್ರಶಾಂತ್ ಅಜ್ಜಿಬೆಟ್ಟು ಮುಂತಾದವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು