ಇತ್ತೀಚಿನ ಸುದ್ದಿ
ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್
November 28, 2020, 6:25 PM

ಬಂಟ್ವಾಳ(reporterkarnataka news):
ಗ್ರಾಮ ಸ್ವರಾಜ್ಯ ಸಮಾವೇಶವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಬಿ. ಸಿ. ರೋಡ್ನ ಸ್ಪರ್ಶ ಕಲಾ ಮಂದಿರದಲ್ಲಿ ಉದ್ಘಾಟಿಸಿದರು.
ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್, ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಟೆಂಗಿನಕಾಯಿ, ಸಂಸದರಾದ ಶೋಭಾ ಕರಂದ್ಲಾಜೆ, ಎಸ್. ಮುನಿಸ್ವಾಮಿ, ಶಾಸಕರುಗಳಾದ
ಡಾ.ವೈ.ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಿ. ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ, ವಿಭಾಗ ಪ್ರಭಾರಿಗಳಾದ ಉದಯ ಕುಮಾರ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ, ಮಂಡಲಗಳ ಅಧ್ಯಕ್ಷರು, ಜನಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.