11:14 PM Wednesday20 - January 2021
ಬ್ರೇಕಿಂಗ್ ನ್ಯೂಸ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ…

ಇತ್ತೀಚಿನ ಸುದ್ದಿ

ಬೆಳಗಾವಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆದ್ಯತೆ: ನಗರಾಭಿವೃದ್ದಿ ಸಚಿವ ಬಸವರಾಜ್

January 8, 2021, 9:02 AM

ಬೆಳಗಾವಿ (reporterkarnataka): ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್ ಅವರು ನಗರದಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.

ಮಹಾನಗರ ಪಾಲಿಕೆಯ ವಾಣಿಜ್ಯ ಕಟ್ಟಡಗಳ ಕಾಮಗಾರಿ ಪರಿಶೀಲನೆ ಮಾಡಿದ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಅವರು, ಇನ್ನೂ ಎರಡು ತಿಂಗಳುಗಳಲ್ಲಿ ವಾಣಿಜ್ಯ ಮಳಿಗೆಗಳ ಕಾಮಗಾರಿಗಳು ಸಂಪೂರ್ಣ ಗೊಳ್ಳುತ್ತಿದ್ದು, ಅರ್ಹ ಫಲಾನಭವಿಗಳ ಆಯ್ಕೆ ಮಾಡಿ ಮಳೆಗೆಗಳನ್ನು ನೀಡಲಾಗುವುದು ಎಂದರು.

ನಗರದಲ್ಲಿರುವ ಪೌರಕಾರ್ಮಿಕರಿಗೆ ಉಚಿತವಾಗಿ ಮನೆಗಳು ನೀಡುವುದಾಗಿ ಹೇಳಿದರು. ಮೊದಲನೇ ಹಂತದಲ್ಲಿ 48 ಮನೆಗಳ ನಿರ್ಮಾಣ ಮಾಡುತಿದ್ದು, 2ನೇ   ಹಂತದಲ್ಲಿ ಸುಮಾರು 158 ಮನೆಗಳ ನಿರ್ಮಾಣ ಮಾಡಲಾಗುವುದು. ಅದಕ್ಕೆ ಟೆಂಡರ್ ಕೂಡ ಕರೆಯಲಾಗಿದ್ದು,  ಇನ್ನೇನು ಕೆಲವೇ ದಿನಗಳಲ್ಲಿ ಆ ಕಾಮಗಾರಿಗಳನ್ನು ಆರಂಭ ಮಾಡಲಿದ್ದೇವೆ  ಎಂದು ಅವರು ಹೇಳಿದರು.

ಬೆಳಗಾವಿ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಕೂಡ ವೀಕ್ಷಿಸಿ ಸಾರ್ವಜನಿಕರ ದೂರುಗಳ ಆಧಾರದ ಮೇಲೆ ಎಲ್ಲೆಲ್ಲಿ ಸಮಸ್ಯೆಗಳಾಗಿವೆ. ಎಲ್ಲವನ್ನೂ ವೀಕ್ಷಿಸಿ ಸಮಾಲೋಚನೆ ನಡೆಸಿದ ಬಳಿಕ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗುವುದು. 

ಈಗಾಗಲೇ ಆರಂಭಿಸಲಾಗಿರುವ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಬಸವರಾಜ್ ಅವರು ಸೂಚನೆ ನೀಡಿದರು.

ಕಳೆದ ಬಾರಿ ಬಂದಾಗ ನಡೆದಿದ್ದ ಕೆಲಸಗಳಿಗೆ ಹೋಲಿಸಿದರ ಪ್ರಗತಿ ಕಂಡುಬಂದಿದೆ. ಕಳೆದ 3 ದಿನಗಳಿಂದ ಹುಬ್ಬಳ್ಳಿ-ಧಾರವಾಡ , ತುಮಕೂರು, ದಾವಣಗೆರೆ ಹಾಗೂ ಬೆಳಗಾವಿಯಲ್ಲಿ ಪರಿಶೀಲನೆ ನಡೆಸುತ್ತಿದ್ದು ಮಹಾನಗರ ವ್ಯಾಪ್ತಿಯಲ್ಲಿ ನಡೆದಿರುವ ಸ್ಮಾರ್ಟ ಸಿಟಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಬಸವರಾಜ್ ತಿಳಿಸಿದರು.

ಇನ್ನು ಕೆಲವೇ ದಿನಗಳಲ್ಲಿ  ವಿಶ್ವ ಬ್ಯಾಂಕ್ ನೆರವಿನಿಂದ 800 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಳಗಾವಿ ಹುಬ್ಬಳ್ಳಿ ಧಾರವಾಡ ಹಾಗೂ ಗುಲ್ಬರ್ಗಾ 

ಜಿಲ್ಲೆಯಲ್ಲಿ 24×7 ಕುಡಿಯುವ ನೀರಿನ ಕಾಮಗಾರಿಗಳಿಗೆ ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದು ಸಚಿವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು