ಇತ್ತೀಚಿನ ಸುದ್ದಿ
ಬೆಂಗಳೂರಿನಲ್ಲಿ ಗುಂಡಿನ ಸದ್ದು: ಸಚಿವರೊಬ್ಬರ ಆಪ್ತ, ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಫೈರಿಂಗ್
August 23, 2020, 5:15 AM

ಬೆಂಗಳೂರು(reporterkarnataka news): ನಗರದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ದಾಳಿಗೆ ತುತ್ತಾದ ವ್ಯಕ್ತಿಯನ್ನು ಅಟೋ ಬಾಬು ಎಂದು ಗುರುತಿಸಲಾಗಿದೆ. ಉದ್ಯಮಿ ಬಾಬು ಬೆಂಗಳೂರಿನ ಸಚಿವರೊಬ್ಬರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಎಂದು ವರದಿಯಾಗಿದೆ.
ಕೆ . ಆರ್ . ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಐದು ಮಂದಿಯ ತಂಡ ಗುಂಡಿನ ದಾಳಿ ನಡೆಸಿ ಬಳಿಕ ಲಾಂಗು ಮಚ್ಚುಗಳಿಂದ ಹಲ್ಲೆ ನಡೆಸಿದೆ.. ಪ್ರಕರಣ ಸಂಬಂಧ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ .