ಇತ್ತೀಚಿನ ಸುದ್ದಿ
ಬೆಂಗಳೂರು ಹಿಂಸಾಚಾರ: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಆರಂಭ
August 17, 2020, 7:30 AM

ಬೆಂಗಳೂರು(reporterkarnataka news): ನಗರದ ಡಿ. ಜೆ. ಹಳ್ಳಿ ಮತ್ತು ಕೆ . ಜಿ. ಹಳ್ಳಿಯಲ್ಲಿ ಸಂಭವಿಸಿದ ಹಿಂಸಾಚಾರ ಕುರಿತಂತೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಆರಂಭವಾಗಿದೆ.
ಗಲಭೆಕೋರರಿಂದ ಆಸ್ತಿ ನಷ್ಟ ವಸೂಲಿ ಮಾಡುವ ಕುರಿತು ಗಂಭೀರ ಚರ್ಚೆ ನಡೆಯುತ್ತಿದೆ. ಈಗಾಗಲೇ ಸುಪ್ರೀಂ ಕೋರ್ಟ್, ಗಲಭೆಗೆ ಕಾರಣರಾದವರಿಂದಲೇ ಹಣ ವಸೂಲಿಗೆ ಅವಕಾಶ ನೀಡಿದೆ.
ಬೆಂಗಳೂರು ಗಲಭೆಗೆ ಸಂಬಂಧಪಟ್ಟಂತೆ ಈಗಾಗಲೇ 350 ಮಂದಿಯನ್ನು ಬಂಧಿಸಲಾಗಿದೆ. ಶಾಸಕ ಅಖಂಡ ಶ್ರೀನಿವಾಸ್ ಅವರ ಮೂರು ಕೋಟಿ ರೂಪಾಯಿ ಬೆಲೆ ಬಾಳುವ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು.. ಹಲವು ವಾಹನಗಳನ್ನು ಹಾನಿಗೊಳಿಸಿದ್ದರು..